ಕರ್ನಾಟಕಪ್ರಮುಖ ಸುದ್ದಿ

ಸುಪ್ರೀಂ ಕೋರ್ಟ್ ನಲ್ಲಿ ಕೇವಿಯಟ್ ಸಲ್ಲಿಸಿದ ಡಿ.ಕೆ.ಶಿವಕುಮಾರ್

ಬೆಂಗಳೂರು,ಅ.31-ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ತಿಹಾರ್ ಜೈಲಿನಿಂದ ಷರತ್ತು ಬದ್ಧ ಜಾಮೀನಿನ ಮೇಲೆ ಹೊರಬಂದಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸುಪ್ರೀಂಕೋರ್ಟ್ಗೆ ಕೇವಿಯಟ್ ಸಲ್ಲಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಗೆ ನೀಡಿರುವ ಜಾಮೀನು ರದ್ದು ಮಾಡಬೇಕೆಂದು ಜಾರಿ ನಿರ್ದೇಶನಾಲಯ (ಇಡಿ) ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. ಅರ್ಜಿಗೆ ಸಂಬಂಧಿಸಿದಂತೆ ತಮ್ಮ ವಾದ ಆಲಿಸದೇ ಯಾವುದೇ ತೀರ್ಪು ನೀಡಬಾರದು ಎಂದು ಡಿಕೆಶಿ ಕೇವಿಯಟ್ ಸಲ್ಲಿಸಿದ್ದಾರೆ.

ಸುಪ್ರೀಂಕೋರ್ಟ್ನಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ಯಾವಾಗ ನಡೆಯಲಿದೆ ಎಂಬುದು ಇನ್ನೂ ಅಂತಿಮಗೊಂಡಿಲ್ಲ. ಆದರೆ, ಅದಕ್ಕೂ ಮೊದಲೇ ಡಿಕೆಶಿ ಕೇವಿಯಟ್ ಸಲ್ಲಿಸಿದ್ದಾರೆ. ಡಿ.ಕೆ.ಶಿವಕುಮಾರ್ ಪ್ರಭಾವಿ ರಾಜಕೀಯ ನಾಯಕರಾಗಿದ್ದು, ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಆದ್ದರಿಂದ, ಜಾಮೀನನ್ನು ರದ್ದುಗೊಳಿಸಬೇಕು ಎಂದು ಜಾರಿ ನಿರ್ದೇಶನಾಲಯ ಅರ್ಜಿಯಲ್ಲಿ ಮನವಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಡಿ.ಕೆ.ಶಿವಕುಮಾರ್ ಬಂಧಿಸಿತ್ತು. ಡಿಕೆಶಿ 48 ದಿನಗಳ ಕಾಲ ತಿಹಾರ್ ಜೈಲಿನಲ್ಲಿದ್ದರು. ಅ.23ರಂದು ದೆಹಲಿ ಹೈಕೋರ್ಟ್ ಡಿಕೆಶಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಅ.25ರಂದು ಜಾರಿ ನಿರ್ದೇಶನಾಲಯ ಡಿ.ಕೆ.ಶಿವಕುಮಾರ್ಗೆ ಷರತ್ತುಬದ್ಧ ಜಾಮೀನು ನೀಡಿರುವ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಜಾಮೀನನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ್, ಪುತ್ರಿ ಐಶ್ವರ್ಯಾರನ್ನು ಸಹ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿದೆ. (ಎಂ.ಎನ್)

Leave a Reply

comments

Related Articles

error: