
ಮೈಸೂರು
ನಾಳೆ ಸುಯೇಜ್ ಫಾರ್ಮ್ ಗೆ ಸಚಿವರ ಭೇಟಿ
ಮೈಸೂರು ನ.1:- ವಸತಿ, ರೇಷ್ಮೆ, ತೋಟಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ ಸೋಮಣ್ಣ ಅವರು ನವೆಂಬರ್ 2 ರಂದು ಬೆಳಿಗ್ಗೆ 9 ಗಂಟೆಗೆ ಜೆ.ಪಿ.ನಗರದಲ್ಲಿರುವ ಸುಯೇಜ್ ಫಾರ್ಮ್ ಗೆ ಭೇಟಿ ನೀಡಿ, ಪರಿವೀಕ್ಷಣೆ ಮಾಡುವರು.
ಘನ ತ್ಯಾಜ್ಯ ಸಂಗ್ರಹಣೆಯಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸಚಿವರು ಖುದ್ದು ಭೇಟಿ ನೀಡಿ, ಪರಿಶೀಲನೆ ಮಾಡುವರು.
ಸಚಿವರೊಂದಿಗೆ ಸಂಸದರಾದ ಪ್ರತಾಪ್ ಸಿಂಹ, ಕೃಷ್ಣರಾಜ ಕ್ಷೇತ್ರದ ಶಾಸಕರಾದ ಎಸ್.ಎ.ರಾಮದಾಸ್, ಸೇರಿದಂತೆ, ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಸಹ ಪಾಲ್ಗೊಳ್ಳುವರು.
ಸುಯೇಜ್ ಫಾರಂ ಪರಿವೀಕ್ಷಣೆ ನಂತರ ಅಲ್ಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಗುರುದತ್ ಹೆಗಡೆ ಅವರು ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)