ಮೈಸೂರು

ಶಾರ್ಟ್ ಸರ್ಕ್ಯೂಟ್‌ನಿಂದ ಬಟ್ಟೆ ಅಂಗಡಿಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಬಟ್ಟೆ ಭಸ್ಮ

ಮೈಸೂರು,ನ.2:- ಶಾರ್ಟ್ ಸರ್ಕ್ಯೂಟ್‌ನಿಂದ ಬಟ್ಟೆ ಅಂಗಡಿಯೊಂದರಲ್ಲಿ  ಬೆಂಕಿ ಕಾಣಿಸಿಕೊಂಡು ಬಟ್ಟೆ ಅಂಗಡಿ ಹೊತ್ತಿ ಉರಿದು ಸುಮಾರು ಏಳು ಲಕ್ಷರೂ.ಮೌಲ್ಯದ ಸ್ವತ್ತು ಬೆಂಕಿಗಾಹುತಿಯಾದ ಘಟನೆ ನಿನ್ನೆ ರಾತ್ರಿ ಮೈಸೂರಿನ ಮೈಸೂರಿನ ಹೆಬ್ಬಾಳು ಸೂರ್ಯಬೇಕರಿ ವೃತ್ತ ಸಮೀಪ ನಡೆದಿದೆ.

ನ್ಯೂ ಬಾಂಬೆ ಬಜಾರ್ ಹೆಸರಿನ ತಾತ್ಕಾಲಿಕ ಜವಳಿ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿತ್ತು.   ರಾತ್ರಿ 11 ಗಂಟೆ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು ನೋಡ ನೋಡುತ್ತಿದ್ದಂತೆಯೇ ಲಕ್ಷಾಂತರ ರೂ. ಮೌಲ್ಯದ ಬಟ್ಟೆಗಳು ಸುಟ್ಟು ಹೋಗಿವೆ.

ವಸ್ತುಗಳನ್ನು ರಕ್ಷಿಸಿಕೊಳ್ಳಲು ಅಂಗಡಿಯವರು ಹರಸಾಹಸ ಪಟ್ಟರು. ಬೆಂಕಿ ಹೊತ್ತಿಕೊಂಡ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ  ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿಗಳು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಇದೇ ವೇಳೆ ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೆ ಹರಡದಂತೆ ಕ್ರಮ ವಹಿಸಿದರು. ಬೆಂಕಿ ಅವಘಡ ಕಂಡು ಸ್ಥಳೀಯರು ಆತಂಕಗೊಂಡರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: