ಮೈಸೂರು

ಬೇಕರಿಗಳು ಮತ್ತು ದಿನಸಿ ಅಂಗಡಿಗಳಿಗೆ ದಿಢೀರ್ ದಾಳಿ ನಡೆಸಿದ ನಗರಸಭೆ ಅಧಿಕಾರಿಗಳು : 25 ಕೆಜಿ ನಿಷೇಧಿತ ಪ್ಲಾಸ್ಟಿಕ್ ಚೀಲ ವಶ

ಮೈಸೂರು,ನ.7:- ಬೇಕರಿಗಳು ಮತ್ತು ದಿನಸಿ ಅಂಗಡಿಗಳಿಗೆ ದಿಢೀರ್ ದಾಳಿ ನಡೆಸಿದ ನಗರಸಭೆ ಅಧಿಕಾರಿಗಳು  25 ಕೆಜಿ ನಿಷೇಧಿತ ಪ್ಲಾಸ್ಟಿಕ್ ಚೀಲಗಳನ್ನು ವಶಪಡಿಸಿಕೊಂಡು 3,500 ರೂ. ದಂಡ ವಿಧಿಸಿದ ಘಟನೆ ಹುಣಸೂರು  ಪಟ್ಟಣದಲ್ಲಿ ನಡೆದಿದೆ.

ಹುಣಸೂರು ನಗರಸಭೆ ಪೌರಾಯುಕ್ತ ಶಿವಪ್ಪನಾಯ್ಕ ನೇತೃತ್ವದಲ್ಲಿ ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿ, ಬಜಾರ್ ರಸ್ತೆ ಮತ್ತು ಜೆಎಲ್‌ಬಿ ರಸ್ತೆಗಳ ಬೇಕರಿ ಮತ್ತು ದಿನಸಿ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಪ್ಲಾಸ್ಟಿಕ್ ಚೀಲಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಮಾತನಾಡಿದ ಪೌರಾಯುಕ್ತರು ನಗರಸಭೆ ವತಿಯಿಂದ ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತು ವರ್ತಕರಲ್ಲಿ ಮಾಹಿತಿ ನೀಡುತ್ತಲೇ  ಇದ್ದರೂ ಕಪ್ಪು ಬಣ್ಣದ ಪ್ಲಾಸ್ಟಿಕ್ ಚೀಲಗಳು, ಒಂದು ಬಾರಿ ಉಪಯೋಗಿಸಿ ಬಿಸಾಡುವ ಪ್ಲಾಸ್ಟಿಕ್ ಚೀಲಗಳನ್ನು ಬಳಸುವುದು ಮುಂದುವರಿದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ಕ್ರಮ ಕೈಗೊಂಡು ನಗರವನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದರು.

ಈ ಸಂದರ್ಭ ಎಇಇ ಮಂಜುನಾಥ್, ಆರ್‌ಐ ಸೋಮಶೇಖರ್, ಆರೋಗ್ಯ ಸಹಾಯಕರಾದ ಸತೀಶ್, ಮೋಹನ್, ರಾಜೇಂದ್ರ ಮತ್ತಿತರರು ಇದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: