ಮನರಂಜನೆ

ಮತ್ತೆ ವರ್ಕೌಟ್ ನಲ್ಲಿ ತೊಡಗಿಸಿಕೊಂಡ ನಟ ಶಿವರಾಜ್ ಕುಮಾರ್

ಬೆಂಗಳೂರು,ನ.7-ನಟ ಶಿವರಾಜ್ ಕುಮಾರ್ ಬಲ ಭುಜದ ಶಸ್ತ್ರಚಿಕಿತ್ಸೆಯ ನಂತರ ವರ್ಕೌಟ್ ಗೆ ಕೊಂಚ ಬ್ರೇಕ್ ನೀಡಿದ್ದರು. ಇದೀಗ ಕೆಲ ತಿಂಗಳ ನಂತರ ಮತ್ತೆ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾರೆ.

ಶಿವಣ್ಣ ಜಿಮ್ ಜೊತೆಗೆ ಯೋಗ ಕೂಡ ಮಾಡಿದ್ದಾರೆ. ಲಘು ವರ್ಕೌಟ್ ಮಾಡುತ್ತಿರುವ ಒಂದಿಷ್ಟು ಫೋಟೋಗಳನ್ನು ಶಿವಣ್ಣ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಟ್ವಿಟರ್ ಹಾಗೂ ಫೇಸ್ಬುಕ್ ನಲ್ಲಿ ವರ್ಕೌಟ್ ಮಾಡುತ್ತಿರುವ ಫೋಟೋವನ್ನು ಪೋಸ್ಟ್ ಮಾಡಿ `ಮಾನಸಿಕವಾಗಿ ಮತ್ತು ದೈಹಿಕವಾಗಿ ಫಿಟ್ ಮತ್ತು ಸ್ಟ್ರಾಂಗ್ ಆಗಿರಿ’ ಎಂದು ಬರೆದುಕೊಂಡಿದ್ದಾರೆ.

ಸಿನಿಮಾದ ಸಾಹಸ ದೃಶ್ಯದ ಶೂಟಿಂಗ್ ವೇಳೆ ಶಿವರಾಜ್ ಕುಮಾರ್ ಅವರ ಬಲ ಭುಜಕ್ಕೆ ಗಾಯವಾಗಿತ್ತು. ಕೊನೆಗೆ ಜುಲೈ ತಿಂಗಳಲ್ಲಿ ಲಂಡನ್ ತೆರಳಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು.

ಶಿವಣ್ಣ ಸದ್ಯ ಭಜರಂಗಿ-2 ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಹರ್ಷ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಭಜರಂಗಿ-2 ಈಗಾಗಲೇ ಸಾಕಷ್ಟು ಚಿತ್ರೀಕರಣ ಮುಗಿಸಿದೆ. ಹರ್ಷ ಮತ್ತು ಶಿವಣ್ಣ ಕಾಂಬಿನೇಶನ್ ನ ಭಜರಂಗಿ ಸೂಪರ್ ಹಿಟ್ ಆಗಿತ್ತು. ಹಾಗಾಗಿ ಭಜರಂಗಿ-2 ಚಿತ್ರದ ಮೇಲಿನ ನಿರೀಕ್ಷೆ ಕೂಡ ಹೆಚ್ಚಾಗಿದೆ.

ಭಜರಂಗಿ-2 ಚಿತ್ರದಿಂದ ಫಸ್ಟ್ ಪೋಸ್ಟರ್ ರಿಲೀಸ್ ಮಾಡಿದ್ದು ಬಿಟ್ಟರೆ ಚಿತ್ರದಿಂದ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಚಿತ್ರದಲ್ಲಿ ಶಿವಣ್ಣ ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೇರ್ ಸ್ಟೈಲ್, ಕಾಸ್ಟ್ಯೂಮ್ ಎಲ್ಲಾ ವಿಭಿನ್ನವಾಗಿರಲಿದೆಯಂತೆ. ಚಿತ್ರದಲ್ಲಿ ಶಿವಣ್ಣಗೆ ನಾಯಕಿಯಾಗಿ ಭಾವನಾ ಕಾಣಿಸಿಕೊಳ್ಳುತ್ತಿದ್ದಾರೆ. ವಿಶೇಷ ಅಂದರೆ ಭಜರಂಗಿ-2 ಪ್ಯಾನ್ ಇಂಡಿಯಾ ಸಿನಿಮಾ ಮಾಡುವ ಪ್ಲಾನ್ ಮಾಡಿದ್ದಾರೆ. ಹಾಗಾಗಿ ಚಿತ್ರದ ಮೇಲೆ ಮತ್ತು ಮೇಕಿಂಗ್ ಮೇಲೆ ನಿರೀಕ್ಷೆ ದುಪ್ಪಟ್ಟಾಗಿದೆ. (ಎಂ.ಎನ್)

 

Leave a Reply

comments

Related Articles

error: