ಮೈಸೂರು

ವಿದ್ಯುತ್ ತಂತಿ ತುಳಿದು ರೈತ ಸಾವು

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ರೈತನೋರ್ವ ಸಾವನ್ನಪ್ಪಿದ  ಘಟನೆ ಮಳವಳ್ಳಿಯಲ್ಲಿ ನಡೆದಿದೆ.
ಮೃತನನ್ನು ಮಳವಳ್ಳಿ ತಾಲೂಕಿನ ಕೆಂಚನದೊಡ್ಡಿ ಗ್ರಾಮದ ಚಿಕ್ಕಮಾದಯ್ಯ(45) ಎಂದು ಗುರುತಿಸಲಾಗಿದೆ. ಈತ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿರುವ ವೇಳೆ ಗಮನಿಸದೇ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು  ತುಳಿದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: