ಮೈಸೂರು

ತಿ.ನರಸೀಪುರ ರಸ್ತೆಯ ವರಕೂಡು ಬಳಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ : ಸ್ಥಳದಲ್ಲೇ ಮೂವರ ಸಾವು

ಮೈಸೂರು,ನ.8:- ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಿ.ನರಸೀಪುರ ರಸ್ತೆಯ ವರಕೂಡು ಬಳಿ ಇಂದು ಮಧ್ಯಾಹ್ನ ಸಂಭವಿಸಿದೆ.

ತಿ.ನರಸೀಪುರ ರಸ್ತೆಯ ವರುಣಾ ವರಕೂಡು ಬಳಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ವರುಣಾ ಠಾಣೆಯ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮೃತ ದೇಹವನ್ನು ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗುತ್ತಿದೆ. ಮೃತರು ಯಾರು ಎಲ್ಲಿಯವರು ಎಂಬ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: