
ಪ್ರಮುಖ ಸುದ್ದಿ
ಅಯೋಧ್ಯೆ ವಿವಾದ ಕುರಿತು, ಸುಪ್ರೀಮ್ ಕೋರ್ಟ್ ಇಂದು ಐತಿಹಾಸಿಕ ತೀರ್ಪು : ಶಾಂತಿ ಕಾಪಾಡಲು ಸಿಎಂ ಮನವಿ
ರಾಜ್ಯ(ಬೆಂಗಳೂರು)ನ.9:- ಶತಮಾನದಷ್ಟು ಹಳೆಯದಾದ ಅಯೋಧ್ಯೆ ವಿವಾದ ಕುರಿತು, ಸುಪ್ರೀಮ್ ಕೋರ್ಟ್ ಇಂದು ಐತಿಹಾಸಿಕ ತೀರ್ಪು ಪ್ರಕಟಿಸಲಿದೆ.
ತೀರ್ಪು ಯಾರ ಪರವೇ ಬರಲಿ ಯಾರೂ ಭಾವೋದ್ವೇಗಕ್ಕೆ ಒಳಗಾಗಬಾರದು. ಕೋಮು ಸೌಹಾರ್ದ ಕದಡದೆ, ಶಾಂತಿ ಕಾಪಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದು ವಿನಂತಿಸಿಕೊಂಡಿದ್ದಾರೆ. (ಎಸ್.ಎಚ್)