ಪ್ರಮುಖ ಸುದ್ದಿ

ಅಯೋಧ್ಯೆ ತೀರ್ಪು ಪ್ರಕಟ : ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್

ದೇಶ(ನವದೆಹಲಿ)ನ.9:- ಅಯೋಧ್ಯೆ ತೀರ್ಪನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೋಯ್, ನ್ಯಾಯಮೂರ್ತಿ ಎಸ್‍ಎ ಬೋಬ್ಡೆ, ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ಕರ್ನಾಟಕ ಮೂಲದ ನ್ಯಾಯಮೂರ್ತಿ ಅಬ್ದುಲ್ ನಜೀರ್ ಮತ್ತು ನ್ಯಾಯಮೂರ್ತಿ ಅಶೋಕ್ ಭೂಷಣ್ ಪೀಠ ತೀರ್ಪನ್ನು ಪ್ರಕಟಿಸಿದೆ.

ವಿವಾದಿತ ಜಾಗ ರಾಮಲಲ್ಲಾ ಪಾಲಿಗೆ ಸೇರಿದ್ದು, ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಜತೆಗೆ ಮಂದಿರ ನಿರ್ಮಾಣಕ್ಕೆ ನಿಯಮ ರೂಪಿಸುವಂತೆ ನ್ಯಾಯಮೂರ್ತಿಗಳು ತೀರ್ಪು ನೀಡಿದ್ದಾರೆ.

ಸುನ್ನಿ ಬೋರ್ಡ್ ಗೆ ವಿಶೇಷ ಅಧಿಕಾರದಡಿ ಅಯೋಧ್ಯೆಯಲ್ಲಿಯೇ ಐದು ಎಕರೆ ಜಮೀನು ನೀಡುವಂತೆ ನ್ಯಾಯಮೂರ್ತಿಗಳು ಆದೇಶ ನೀಡಿದ್ದಾರೆ. ರಾಮ ಮಂದಿರ ನಿರ್ಮಾಣದ ಜವಾಬ್ದಾರಿಯನ್ನು ಕೇಂದ್ರ ಸರಕಾರಕ್ಕೆ ವಹಿಸಲಾಗಿದೆ. ಜತೆಗೆ ಇದರ ನಿರ್ಮಾಣ ಜವಾಬ್ದಾರಿಯನ್ನು ಟ್ರಸ್ಟ್ ಗೆ ನೀಡುವಂತೆ ಸುಪ್ರೀಂ ಕೋರ್ಟ್ ಹೇಳಿದೆ.  ವಿವಾದಿತ ರಾಮಜನ್ಮಭೂಮಿ ಪ್ರಕರಣದ ವಿವಾದ ವಿಚಾರದಲ್ಲಿ ಸುಪ್ರೀಂಕೋರ್ಟ್​ ಇಂದು ತೀರ್ಪು ಪ್ರಕಟ ಮಾಡಿದ್ದು, ಎಲ್ಲಾ ಧರ್ಮವನ್ನೂ ಗೌರವಿಸುವುದಾಗಿ ಹೇಳಿದ ಸುಪ್ರೀಂ ಕೋರ್ಟ್​ನ ಸಾಂವಿಧಾನಿಕ ಪೀಠ, ಕೇವಲ ನಂಬಿಕೆಗಳಿಂದ ಭೂಮಿಯ ಹಕ್ಕುದಾರಿಕೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.  ಜತೆಗೆ ಹಿಂದೂಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿ ಅಯೋಧ್ಯೆಯಲ್ಲಿ ಜಾಗವನ್ನು ನೀಡಿ ಸುಪ್ರೀಂ ಕೋರ್ಟ್​ ಆದೇಶಿಸಿದೆ.  ಇನ್ನು ಮುಸ್ಲಿಂ ಸಮುದಾಯಕ್ಕೆ ಬದಲಿ ಜಾಗವನ್ನು ನೀಡಲು ಸಹ ಸುಪ್ರೀಂ ಕೋರ್ಟ್​ ಆದೇಶಿಸಿದೆ. ಈ ಮೂಲಕ ಅತಿ ಹಳೆಯ ವಿವಾದಕ್ಕೆ ತೆರೆ ಎಳೆದಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: