ಮೈಸೂರು

ನಿವೃತ್ತ ಪ್ರೊ .ಎಂ.ಕೃಷ್ಣೇಗೌಡರಿಗೆ ಶುಭಹಾರೈಕೆ

ಮೈಸೂರಿನ ಸಂತ ಫಿಲೋಮಿನಾ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾದ ಪ್ರೊ. ಎಂ. ಕೃಷ್ಣೇಗೌಡ ಅವರನ್ನು ಜ್ಞಾನಬುತ್ತಿ ಬಳಗದವತಿಯಿಂದ ನಿವೃತ್ತಿ ಜೀವನ ಸುಖಕರವಾಗಿರಲೆಂದು ಶುಭ ಹಾರೈಸಲಾಯಿತು.

ಈ ಸಂದರ್ಭ ಜ್ಞಾನಬುತ್ತಿ ಸಂಸ್ಥೆಯ ಸಂಸ್ಥಾಪಕ ಮತ್ತು ಕನ್ನಡ ಎಂ.ಎ., ಉಚಿತ ತರಬೇತಿ ವಿಭಾಗದ ಅಧ್ಯಕ್ಷ ಪ್ರೊ. ಎಂ. ಕೃಷ್ಣೇಗೌಡ ಅವರನ್ನು ಜ್ಞಾನಬುತ್ತಿ ಸಂಸ್ಥೆಯ ಉಪಾಧ್ಯಕ್ಷ ವೈ.ಎನ್. ಶಂಕರೇಗೌಡ, ಪ್ರಧಾನ ಕಾರ್ಯದರ್ಶಿ ಜೈನಹಳ್ಳಿ ಸತ್ಯನಾರಾಯಣ ಗೌಡ, ಜೆ.ಎಸ್.ಎಸ್. ಪದವಿ ಕಾಲೇಜಿನ ಪ್ರಾಂಶುಪಾಲ
ಪ್ರೊ. ಎನ್. ಮಹದೇವಸ್ವಾಮಿ, ಕಾರ್ಯದರ್ಶಿ ಎಚ್.ಬಾಲಕೃಷ್ಣ, ಪ್ರೊ. ಕೃ.ಪ.ಗಣೇಶ, ಡಾ.ಎಸ್.ಬಿ.ಎಂ. ಪ್ರಸನ್ನ, ಎಂ.ರಾಮೇಗೌಡ, ಗಣೇಶ್ ಕೊಪ್ಪಲ್ ಉಪಸ್ಥಿತರಿದ್ದರು.

Leave a Reply

comments

Related Articles

error: