ದೇಶಪ್ರಮುಖ ಸುದ್ದಿ

ಕಾಚಿಗುಡಾ ರೈಲ್ವೆ ನಿಲ್ದಾಣದಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿ: 10ಕ್ಕೂ ಹೆಚ್ಚು ಮಂದಿ ಗಾಯ

ಹೈದರಾಬಾದ್,.11-ಕಾಚಿಗುಡಾ ರೈಲ್ವೆ ನಿಲ್ದಾಣದಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಪ್ಲಾಟ್ಫಾರಂಗಾಗಿ ಕಾದು ನಿಂತುಕೊಂಡಿದ್ದ ಕೊಂಗು ಎಕ್ಸ್ಪ್ರೆಸ್ ರೈಲಿಗೆ ಎಂಎಂಟಿಎಸ್ ರೈಲು ಅಪ್ಪಳಿಸಿದೆ. ಸಿಗ್ನಲ್ ದೋಷದಿಂದಾಗಿ ಘಟನೆ ನಡೆದಿದೆ ಎಂದು ದಕ್ಷಿಣ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ರಕ್ಷಣಾ ಕಾರ್ಯ ಪ್ರಗತಿಯಲ್ಲಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. (ಎಂ.ಎನ್)

Leave a Reply

comments

Related Articles

error: