ಕರ್ನಾಟಕಪ್ರಮುಖ ಸುದ್ದಿ

ಆಸ್ಪತ್ರೆಗೆ ದಾಖಲಾದ ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು,ನ.12-ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಸೋಮವಾರ ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎದೆನೋವು ಮತ್ತು ಉಸಿರಾಟ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶೇಷಾದ್ರಿಪುರಂ ಬಳಿಯಿರುವ ಅಪೋಲೋ ಅಸ್ಪತ್ರೆಗೆ ಡಿಕೆಶಿ ಅವರನ್ನು ದಾಖಲಿಸಲಾಗಿದೆ.

ಕಳೆದ ಹತ್ತು ದಿನದ ಹಿಂದೆಯಷ್ಟೇ ಅರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದ ಅವರು ಈಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಡಿ.ಕೆ. ಶಿವಕುಮಾರ್ ಅವರಿಗೆ ಕಡ್ಡಾಯ ವಿಶ್ರಾಂತಿ ಅಗತ್ಯ ಎಂದು ವೈದ್ಯರು ಸಲಹೆ ನೀಡಿರುವುದರಿಂದ ಕನಿಷ್ಟ ಮೂರು ದಿನವಾದರೂ ಯಾರೂ ಅವರ ಭೇಟಿಗೆ ಬರಬಾರದು ಎಂದು ಕುಟುಂಬ ಸದಸ್ಯರು ಮನವಿ ಮಾಡಿಕೊಂಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ದೆಹಲಿಯ ತಿಹಾರ್ ಜೈಲಿನಲ್ಲಿ 48 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದ ಡಿಕೆಶಿ ಅ.23ರಂದು ಜಾಮೀನಿನ ಮೇಲೆ ಹೊರ ಬಂದಿದ್ದರು. ತಿಹಾರ್ ಜೈಲಿನಲ್ಲಿದ್ದಾಗಲೂ ಆರೋಗ್ಯ ಕೈಕೊಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಜಾಮೀನು ಸಿಕ್ಕ ಬಳಿಕ ಅ.26ರಂದು ಬೆಂಗಳೂರಿಗೆ ಆಗಮಿಸಿದ ಡಿಕೆಶಿ ಅವರು ಹಲವು ದೇವಾಲಯ, ಮಠಗಳಿಗೆ ಭೇಟಿ ನೀಡಿದ್ದರು. (ಎಂ.ಎನ್)

Leave a Reply

comments

Related Articles

error: