ಮೈಸೂರು

ಅಸ್ವಸ್ಥರಾಗಿ ಬಿದ್ದಿದ್ದ ವ್ಯಕ್ತಿ ಸಾವು

ಮೈಸೂರು,ನ.13:- ಇಲ್ಲಿನ ಕೆ.ಆರ್.ಆಸ್ಪತ್ರೆಯ ಆವರಣದಲ್ಲಿ ಅಸ್ವಸ್ಥರಾಗಿ ಬಿದ್ದಿದ್ದ ವ್ಯಕ್ತಿಯೋರ್ವರು ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ.

ಅವರಿಗೆ ಸುಮಾರು 70ವರ್ಷ ವಯಸ್ಸಾಗಿರಬಹುದೆಂದು ಅಂದಾಜಿಸಲಾಗಿದೆ. ಇವರು ಅ.23ರಂದು ಅಸ್ವಸ್ಥರಾಗಿದ್ದರು. ಇವರನ್ನು ದೇವರಾಜ ಠಾಣೆ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಇವರ ಎಡಗಾಲಿಗೆ ಗಾಯವಾಗಿದ್ದು ಬ್ಯಾಂಡೇಜ್ ಸುತ್ತಲಾಗಿತ್ತು. ಇವರ ಗುರುತು ಪತ್ತೆಯಾದವರು ದೂ.ಸಂ.0821-2418100ಸಂಪರ್ಕಿಸಲು ಕೋರಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: