ಮೈಸೂರು

ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸಿದ ಶಿಕ್ಷಣ ಇಲಾಖೆಯ ಸಚಿವರು ಮತ್ತು ಪ್ರಧಾನ ಕಾರ್ಯದರ್ಶಿಗಳು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ

ಮೈಸೂರು,ನ.15:- ಸಂವಿಧಾನವನ್ನು ರಚಿಸಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸಿದ ಶಿಕ್ಷಣ ಇಲಾಖೆಯ ಸಚಿವರು ಮತ್ತು ಪ್ರಧಾನ ಕಾರ್ಯದರ್ಶಿಗಳು ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರು ಪುರಭವನದ ಬಳಿ ಇರುವ ಅಂಬೇಡ್ಕರ್ ಪ್ರತಿಮೆ ಎದುರು ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಭಾರತದ ಅಖಂಡತೆ, ಸಹೋದರತೆ, ಸಮಗ್ರತೆ ಇರುವ ಭಾರತದ ಸಂವಿಧಾನದ ಕುರಿತು ಇತ್ತೀಚಿನ ದಿನಗಳಲ್ಲಿ ಇಲ್ಲ ಸಲ್ಲದ ಹೇಳಿಕೆಗಳು ಕೇಳಿ ಬರುತ್ತಿದ್ದು, ಡಾ.ಅಂಬೇಡ್ಕರ್ ಅವರನ್ನು ಅವಮಾನಿಸುವ ಹುನ್ನಾರ ನಡೆಯುತ್ತಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ನ.26ಸಂವಿಧಾನ ದಿನವೆಂದು ಘೋಷಿಸಿದ್ದು, ಅದರಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಓರ್ವರೇ ಸಂವಿಧಾನ ಬರೆದಿಲ್ಲ ಎಂಬುದನ್ನು ಸೇರಿಸಿ ಸಮಗ್ರ ಭಾರತೀಯರಿಗೆ ತಪ್ಪು ಸಂದೇಶ ರವಾನಿಸಲಾಗಿದೆ. ಇದು ಮನುವಾದಿಗಳ ಕೊಳಕು ಮನಸ್ಥಿತಿಯನ್ನು ಪ್ರದರ್ಶಿಸುತ್ತಿದೆ ಎಂದು ಆರೋಪಿಸಿದರು. ಜ.26ರಂದೇ ಸಂವಿಧಾನ ದಿನಾಚರಣೆಯನ್ನು ಆಚರಿಸಬೇಕು. ಸಂವೀಧಾನ ಸಭೆಯ ಚರ್ಚೆಗಳನ್ನು ಹಾಗೂ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಮ್ಯೂಸಿಯಂ ರೀತಿ ಮಾಡಿ ಸಂರಕ್ಷಿಸಬೇಕು.  ಸಂವಿಧಾನವನ್ನು ಒಪ್ಪದಿದ್ದವರು ದೇಶವನ್ನು ಬಿಟ್ಟು ಹೋಗಬೇಕು. ಕೇಮದ್ರ ಸರ್ಕಾರ ಒಂದು ದೇಶ, ಒಂದು ಸಂವಿಧಾನವೆಂದು ಹೇಳುತ್ತಿದೆ. ಆದರೆ ಅಸಮಾನತೆ, ಅಸ್ಪೃಶ್ಯತೆ ಹಾಗೆಯೇ ಇದೆ. ಆದ್ದರಿಂದ ಕಠಿಣ ಕಾನೂನುಗಳನ್ನು ರೂಪಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಹದೇವು, ಶಂಕರ್, ನಾಗರಾಜು, ಪುರುಷೋತ್ತಮ, ಕೆ.ರಾಮನಿಂಗ, ರಮೇಶ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: