ಮೈಸೂರು

ಕುಡಿದ ಮತ್ತಿನಲ್ಲಿ ಕಾರು ಚಾಲನೆ : ಕೃಷಿಹೊಂಡಕ್ಕೆ ಬಿದ್ದ ಕಾರು; ಚಾಲಕ ಸಾವು

ಮೈಸೂರು,ನ.16:-   ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿಕೊಂಡು ಹೋದ ಪರಿಣಾಮ ಕಾರು ನೀರು ತುಂಬಿಕೊಂಡಿದ್ದ ಕೃಷಿ ಹೊಂಡಕ್ಕೆ ಬಿದ್ದು ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಚಾಲಕನನ್ನು ದೊಡ್ಡಕವಲಂದೆ ಗ್ರಾಮದ ಹರಿಪ್ರಸಾದ್ (27) ಎಂದು ಗುರುತಿಸಲಾಗಿದೆ.  ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು  ಆಸ್ಪತ್ರೆಗೆ ದಾಖಲಿಸಲಾಗಿದೆ. ತಗಡೂರು ಗ್ರಾಮದಿಂದ ದೊಡ್ಡ ಕವಲಂದೆಗೆ ತೆರಳುವ ವೇಳೆ ಘಟನೆ ನಡೆದಿದೆ. ಚುಂಚನಹಳ್ಳಿ ಗ್ರಾಮದ ಮಾದಯ್ಯನ ಗುಡ ಬಳಿ ಕಾರು ನಿಯಂತ್ರಣ ತಪ್ಪಿ ಘಟನೆ ನಡೆದಿದ್ದು, ಕಾರು ಚಾಲಕ ಪಾನಮತ್ತನಾಗಿದ್ದ ಎನ್ನಲಾಗಿದೆ.

ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: