ಕರ್ನಾಟಕ

ಶಾಸಕ ತನ್ವೀರ್ ಸೇಠ್ ಮೇಲಿನ ಹಲ್ಲೆ ನೋವು ತರಿಸಿದೆ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು,ನ.18- ಶಾಸಕ ತನ್ವೀರ್ ಸೇಠ್ ಅವರ ಮೇಲಿನ ಹಲ್ಲೆ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ತನ್ವೀರ್ ಸೇಠ್ ಮೇಲಿನ ಹಲ್ಲೆ ಕುರಿತು ಮಾತನಾಡಿರುವ ಬಿಎಸ್ವೈ, ಘಟನೆ ಕುರಿತು ನೋವಾಗಿದೆ. ತನ್ವೀರ್ ಸೇಠ್ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು ಶಾಸಕರ ಚಿಕಿತ್ಸೆ ಕುರಿತು ಮಾಹಿತಿ ಪಡೆದುಕೊಂಡಿರುವುದಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಿಗೆ ಕೂಡಲೇ ಮೈಸೂರಿಗೆ ತೆರಳಿ ತನ್ವೀರ್ ಸೇಠ್ ಅವರ ಆರೋಗ್ಯ ವಿಚಾರಿಸಿ ಚಿಕಿತ್ಸೆಯ ಮಾಹಿತಿ ಪಡೆಯುವಂತೆ ಸೂಚಿಸಿದ್ದು, ಅವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ. (ಎಂ.ಎನ್)

Leave a Reply

comments

Related Articles

error: