ಮೈಸೂರು

ಶಾಸಕ ತನ್ವೀರ್ ಸೇಠ್ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಚಿವ ಹೆಚ್.ವಿಶ್ವನಾಥ್-ಮಾಜಿ ಸಂಸದ ಧೃವನಾರಾಯಣ್

ಮೈಸೂರು,ನ.19:- ಶಾಸಕ ತನ್ವೀರ್ ಸೇಠ್ ಅವರ ಮೇಲೆ ಕಳೆದ ಭಾನುವಾರ ರಾತ್ರಿ ಮದುವೆಗೆ ಹೋದ ಸಂದರ್ಭದಲ್ಲಿ ಹಲ್ಲೆ ನಡೆಸಲಾಗಿದ್ದು, ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿರುವ ಶಾಸಕ ತನ್ವೀರ್ ಸೇಠ್ ಅವರ ಆರೋಗ್ಯವನ್ನು ಮಾಜಿ ಸಚಿವ, ಹುಣಸೂರು ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಮತ್ತು ಮಾಜಿ ಸಂಸದ ಆರ್,ಧೃವನಾರಾಯಣ್ ವಿಚಾರಿಸಿದರು. ಇಂದು ಬೆಳಿಗ್ಗೆ ಆಸ್ಪತ್ರೆಗೆ ತೆರಳಿದ ರಾಜಕೀಯ ಧುರೀಣರು  ಅವರ ಆರೋಗ್ಯ ವಿಚಾರಿಸಿ ಶೀಘ್ರದಲ್ಲಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲೆಂದು ಶುಭ ಹಾರೈಸಿದರು.

ಆಸ್ಪತ್ರೆಯಿಂದ ಹೊರ ಬಂದ ಬಳಿಕ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಮತ್ತು ಮಾಜಿ ಸಂಸದ ಧೃವನಾರಾಯಣ್ ಪರಸ್ಪರ ಕೈಕುಲುಕಿಕೊಂಡಿದ್ದು, ಉಭಯಕುಶಲೋಪರಿ ನಡೆಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: