ಸುದ್ದಿ ಸಂಕ್ಷಿಪ್ತ

ಕೋಟೆ ಶ್ರೀಮಹಾಗಣಪತಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶಾಂತಿಪೂಜೆ

ಮಡಿಕೇರಿ ನ.20 :- ಮಡಿಕೇರಿಯ ಐತಿಹಾಸಿಕ ಶ್ರೀಕೋಟೆ ಮಹಾಗಣಪತಿ ದೇವಾಲಯದಲ್ಲಿ ಶಾಂತಿಪೂಜೆ ಶ್ರದ್ಧಾಭಕ್ತಿಯಿಂದ ಜರುಗಿತು. ದಸರಾ ಮಹೋತ್ಸವದ ದಶಮಂಟಪ ಶೋಭಾಯಾತ್ರೆಯಲ್ಲಿ ಸಾಗಿದ ಮೂರ್ತಿಗಳಿಗೆ ಶಾಂತಿಪೂಜೆ ಸಲ್ಲಿಸಲಾಯಿತು. ಅಭಿಷೇಕ, ಅಲಂಕಾರ, ಅರ್ಚನೆ, ವಿಶೇಷ ಪೂಜೆಯ ನಂತರ ಮಹಾಮಂಗಳಾರತಿ ನಡೆಯಿತು. ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗವಾಯಿತು. ಶ್ರೀಕೋಟೆ ಮಹಾಗಣಪತಿ ಮಂಟಪ ಸಮಿತಿಯ ಪದಾಧಿಕಾರಿಗಳು ಈ ಸಂದರ್ಭ ಹಾಜರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: