ಸುದ್ದಿ ಸಂಕ್ಷಿಪ್ತ

ಮಳೆಹಾನಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲು ಒತ್ತಾಯ

ಮಡಿಕೇರಿ ನ.20 :- ಮಳೆಹಾನಿಗೊಳಗಾದವರಿಗೆ ಸೂಕ್ತ ಪರಿಹಾರ ನೀಡಬೇಕು ಮತ್ತು ಹಾನಿಗೀಡಾದ ಪ್ರದೇಶಗಳ ಅಭಿವೃದ್ಧಿ ಕಾರ್ಯ ಚುರುಕುಗೊಳಿಸಬೇಕೆಂದು ಸಂತ್ರಸ್ತರು ಒತ್ತಾಯಿಸಿದ್ದಾರೆ. ಜಿಲ್ಲೆಯಲ್ಲಿ 2018 ಮತ್ತು 2019ರ ಪ್ರಾಕೃತಿಕ ವಿಕೋಪದಲ್ಲಿ ಸುಮಾರು 40 ಮಾನವರ ಜೀವಹಾನಿಯಾಗಿದ್ದರೆ, 352 ಜಾನುವಾರುಗಳು ಮೃತಪಟ್ಟಿವೆ. ಸುಮಾರು 6,397 ಮನೆಗಳು, 265 ಅಂಗನವಾಡಿಗಳು, 239 ಶಾಲೆಗಳು ಹಾಗೂ 20 ಆರೋಗ್ಯ ಕೇಂದ್ರ ಕಟ್ಟಡಗಳು ಹಾನಿಗೊಳಗಾಗಿವೆ. ಸಾರ್ವಜನಿಕ ಆಸ್ತಿಪಾಸ್ತಿಗೆ 1736 ಕೋಟಿ ರೂ.ಗಳಷ್ಟು ನಷ್ಟ ಸಂಭವಿಸಿದೆ. ಇಲ್ಲಿಯವರೆಗೆ ಸರ್ಕಾರದಿಂದ ಸೂಕ್ತ ಪರಿಹಾರ ಕಾರ್ಯ ನಡೆದಿಲ್ಲ ಎನ್ನುವ ಆರೋಪ ಸಂತ್ರಸ್ತರಿಂದ ಕೇಳಿಬಂದಿದೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: