ಪ್ರಮುಖ ಸುದ್ದಿ

ಇಂದಿರಾ ಕ್ಯಾಂಟೀನ್ ಉದ್ಘಾಟನೆಯಾಗದಿದ್ದಲ್ಲಿ ಕಾಂಗ್ರೆಸ್‍ನಿಂದ ಪ್ರತಿಭಟನೆ

ರಾಜ್ಯ( ಮಡಿಕೇರಿ) ನ.21 :- ಹಿಂದಿನ ಕಾಂಗ್ರೆಸ್ ಸರ್ಕಾರ ರಿಯಾಯಿತಿ ದರದ ಆಹಾರದ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಅನುಷ್ಠಾನಗೊಳಿಸಿತು. ಆದರೆ ವಿರಾಜಪೇಟೆ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣಗೊಂಡು ಹಲವು ದಿನಗಳೇ ಕಳೆದಿದ್ದರೂ ಜನರಿಗೆ ಅರ್ಪಿಸದೆ ನಿರ್ಲಕ್ಷ್ಯ ತೋರಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಆರೋಪಿಸಿದ್ದಾರೆ.
ಮುಂದಿನ 15 ದಿನಗಳೊಳಗೆ ಕ್ಯಾಂಟಿನ್ ಸೇವೆ ಆರಂಭಗೊಳ್ಳದಿದ್ದಲ್ಲಿ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಮಾಧ್ಯಮ ಹೇಳಿಕೆಯಲ್ಲಿ ಎಚ್ಚರಿಕೆ ನೀಡಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: