ಕರ್ನಾಟಕಪ್ರಮುಖ ಸುದ್ದಿ

ಡಿವೈಎಸ್​​ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ: ಸಿಬಿಐನಿಂದ ಕೆ.ಜೆ.ಜಾರ್ಜ್​​​ಗೆ ಕ್ಲೀನ್​​ಚಿಟ್

ಬೆಂಗಳೂರು,ನ.21- ಡಿವೈಎಸ್​​ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಜೆ.ಜಾರ್ಜ್​​​ಗೆ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಕ್ಲೀನ್​​ಚಿಟ್​​ ನೀಡಿದೆ.

ಪ್ರಕರಣ ಸಂಬಂಧ ಸಿಬಿಐ ಮಡಿಕೇರಿ ನ್ಯಾಯಲಯಕ್ಕೆ ಸಲ್ಲಿಸಿರುವ ‘ಬಿ’ ರಿಪೋರ್ಟ್​​ನಲ್ಲಿ ಮಾಜಿ ಸಚಿವ ಕೆ.ಜೆ.ಜಾರ್ಜ್, ಹಿರಿಯ ಐಪಿಎಸ್‌ ಅಧಿಕಾರಿಗಳಾದ ಪ್ರಣವ್‌ ಮೊಹಂತಿ, ಎ.ಎಂ.ಪ್ರಸಾದ್​​ ದೋಷಮುಕ್ತರು ಎಂದು ಉಲ್ಲೇಖಿಸಿದೆ.

‘ಬಿ’ ರಿಪೋರ್ಟ್​​ನಲ್ಲಿ ಡಿವೈಎಸ್​​ಪಿ ಗಣಪತಿಯವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ದೆಹಲಿಯ ಏಮ್ಸ್‌ ಆಸ್ಪತ್ರೆಯ ವೈದ್ಯರು ನಡೆಸಿದ ಮರಣೋತ್ತರ ಪರೀಕ್ಷೆಯಲ್ಲಿ ಬಹಿರಂಗವಾಗಿದೆ. ಈ ವರದಿ ಆಧಾರದ ಮೇಲೆ ಗಣಪತಿಯವರದ್ದು ಕೊಲೆಯಲ್ಲ. ಆತ್ಮಹತ್ಯೆ ಎಂಬುದು ಸಾಬೀತಾಗಿದೆ ಎಂದು ಸಿಬಿಐ ಹೇಳಿದೆ.

ಮಾಜಿ ಸಚಿವ ಕೆ.ಜೆ.ಜಾರ್ಜ್​​​​ ಗಣಪತಿಯವರಿಗೆ ಕಿರುಕುಳ ನೀಡಿದ್ದರು ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ. ಗಣಪತಿಯವರಿಗೆ ಯಾವ ಕಿರುಕುಳ ಇರಲಿಲ್ಲ. ತಮ್ಮ ವೈಯಕ್ತಿಕ ಕಾರಣಗಳಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ ಎಂದು ಸಿಬಿಐ ನ್ಯಾಯಲಕ್ಕೆ ನೀಡಿದ `ಬಿ’ ರಿಪೋರ್ಟ್​ ಸಲ್ಲಿಸಿದೆ.

ಮಡಿಕೇರಿಯಲ್ಲಿ 2016ರಲ್ಲಿ ಡಿವೈಎಸ್‌ಪಿ ಎಂ.ಕೆ.ಗಣಪತಿಯವರು ಅನುಮಾನಸ್ಪದ ಸಾವನ್ನಪ್ಪಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲಿ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು. ಆಗ ಗೃಹ ಸಚಿವರಾಗಿದ್ದ ಕೆ.ಜೆ ಜಾರ್ಜ್​​​​​ ಅವರೇ ಗಣಪತಿ ಸಾವಿಗೆ ಕಾರಣ ಎಂಬ ಆರೋಪ ಕೇಳಿ ಬಂದಿತ್ತು.

ಬಳಿಕ ಪ್ರಕರಣದ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್‌ ಚೆನ್ನೈನ ಸಿಬಿಐಗೆ ಆದೇಶಿಸಿತ್ತು. ಸುಪ್ರೀಂಕೋರ್ಟ್ ನಿರ್ದೇಶನದಂತೆ ಸಿಬಿಐ ತನಿಖೆ ಪೂರ್ಣಗೊಳಿಸಿದೆ. ಅಲ್ಲದೆ, ಪ್ರಕರಣ ಸಂಬಂಧ ಒಟ್ಟು 262 ಪುಟಗಳ ಸುದೀರ್ಘ‌ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. (ಎಂ.ಎನ್)

Leave a Reply

comments

Related Articles

error: