ಪ್ರಮುಖ ಸುದ್ದಿ

ನ.26 ರಂದು ಸಂವಿಧಾನ ದಿನಾಚರಣೆ : ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪರಿಂದ ವಿಚಾರ ಮಂಡನೆ

ರಾಜ್ಯ( ಮಡಿಕೇರಿ) ನ.22 :- ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಮತ್ತು ಜಿಲ್ಲಾ ಕಾಂಗ್ರೆಸ್ ಆಶ್ರಯದಲ್ಲಿ ನ.26 ರಂದು ನಗರದಲ್ಲಿ 71ನೇ ಸಂವಿಧಾನ ದಿನಾಚರಣೆ ನಡೆಯಲಿದೆ. ಎಐಸಿಸಿ ವಕ್ತಾರರು ಹಾಗೂ ಸುಪ್ರೀಂ ಕೋರ್ಟ್‍ನ ನ್ಯಾಯವಾದಿಗಳಾದ ಪಾಲಚಂಡ ಬ್ರಿಜೇಶ್ ಕಾಳಪ್ಪ ಅವರು ಸಂಪನ್ಮೂಲ ವ್ಯಕ್ತಿಯಾಗಿ ವಿಚಾರ ಮಂಡನೆ ಮಾಡಲಿದ್ದಾರೆ ಎಂದು ಪಂಚಾಯತ್‍ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನಿರ ಮೈನಾ ತಿಳಿಸಿದ್ದಾರೆ.
ನಗರದ ಕೊಡವ ಸಮಾಜ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಎಐಸಿಸಿ ಕಾರ್ಯದರ್ಶಿ ಹಾಗೂ ಮಹಾರಾಷ್ಟ್ರ ರಾಜ್ಯ ಉಸ್ತುವಾರಿಗಳಾದ ಬಿ.ಎಂ.ಸಂದೀಪ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯಾಧ್ಯಕ್ಷ ಎಂ.ಎ.ರಂಗಸ್ವಾಮಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಕೆಪಿಸಿಸಿ ಉಪಾಧ್ಯಕ್ಷ ಮಿಟ್ಟುಚಂಗಪ್ಪ, ಮಾಜಿ ಸಚಿವರುಗಳಾದ ಎಂ.ಸಿ.ನಾಣಯ್ಯ, ಸುಮಾವಸಂತ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಚಂದ್ರಕಲಾ, ಕೆ.ಎಂ.ಇಬ್ರಾಹಿಂ, ಸಿ.ಎಸ್.ಅರುಣ್‍ಮಾಚಯ್ಯ ಸೇರಿದಂತೆ ಕೆಪಿಸಿಸಿ ಪದಾಧಿಕಾರಿಗಳು, ಡಿಸಿಸಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಮುಂಚೂಣಿ ಘಟಕಗಳ ಅಧ್ಯಕ್ಷರು, ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತ್ ಸದಸ್ಯರುಗಳು, ಗ್ರಾ.ಪಂ ಅಧ್ಯಕ್ಷರು, ಸದಸ್ಯರುಗಳು, ನಗರ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು, ವಲಯ ಮತ್ತು ಬೂತ್ ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ತೆನ್ನಿರಾ ಮೈನಾ ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: