ಪ್ರಮುಖ ಸುದ್ದಿ

ಮಡಿಕೇರಿ ಜೈಲ್ ನಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ

ರಾಜ್ಯ( ಮಡಿಕೇರಿ) ನ.22 :- ವಿಚಾರಣಾಧೀನ ಖೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿಯ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.
ಮೂಲತಃ ಪಿರಿಯಾಪಟ್ಟಣದ ನಿವಾಸಿ, ಸಿದ್ದರಾಜು(22) ಎಂಬಾತನೇ ಆತ್ಮಹತ್ಯೆಗೆ ಶರಣಾದ ಆರೋಪಿಯಾಗಿದ್ದಾನೆ.
ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಿದ್ದರಾಜು, ಕೊಡಗು ಜಿಲ್ಲಾ ಪೊಲೀಸರಿಂದ ಬಂಧಿಸಲ್ಪಟ್ಟು ಕಳೆದ 4 ತಿಂಗಳಿಂದ ಮಡಿಕೇರಿಯ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯಾಗಿ ಬಂಧಿಯಾಗಿದ್ದ.
ಇಂದು ಸಂಜೆ 5 ಗಂಟೆ ಸುಮಾರಿಗೆ ಸಿದ್ದರಾಜು, ಸೆಲ್‍ನ ಒಳಗಿನ ಶೌಚಾಲಯದ ಗೋಡೆಯಲ್ಲಿದ್ದ ನೀರಿನ ಪೈಪ್‍ಗೆ ಸ್ಕ್ರೀನ್‍ನ ಒಂದು ತುಂಡನ್ನು ಹಗ್ಗದಂತೆ ಬಳಸಿಕೊಂಡು ನೇಣು ಬಿಗಿದುಕೊಂಡಿದ್ದಾನೆ ಎಂದು ಹೇಳಲಾಗಿದೆ.
ಇದನ್ನು ಗಮನಿಸಿದ ಜೈಲು ಸಿಬ್ಬಂದಿಗಳು ತಕ್ಷಣ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆ ತಂದಿದ್ದಾರೆ. ಆದರೆ ದಾರಿ ಮಧ್ಯೆಯೇ ಸಿದ್ದರಾಜುವಿನ ಪ್ರಾಣಪಕ್ಷಿ ಹಾರಿಹೋಗಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ಜೈಲಿನ ಅಧಿಕಾರಿಗಳು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: