ಪ್ರಮುಖ ಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ಲಕ್ಷ ದೀಪೋತ್ಸವ

ರಾಜ್ಯ(ಮಂಗಳೂರು)ನ.22:-  ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ  ಇಂದಿನಿಂದ ಅಂದರೆ ನ.22ರಿಂದ 26ರವರೆಗೆ ನಡೆಯಲಿದೆ.

ಶ್ರೀಕ್ಷೇತ್ರದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ಇತರೆ ಉತ್ಸವಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆ ಪಡೆದಿದೆ. ಶ್ರೀ ಮಂಜುನಾಥಸ್ವಾಮಿಯ ಐದು ದಿನಗಳ ಉತ್ಸವಗಳು, ಶ್ರೀ ಚಂದ್ರನಾಥ ಸ್ವಾಮಿ ಸಮವಸರಣ ಪೂಜೆ ನಡುವೆಯೇ, ಖ್ಯಾತ ವಿದ್ವಾಂಸರು, ಗಣ್ಯರು ಹಾಗೂ ಕಲಾವಿದರ ಸಹಭಾಗಿತ್ವದಲ್ಲಿ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನಗಳ 87ನೇ ಅಧಿವೇಶನವೂ ಸಂಪನ್ನಗೊಳ್ಳಲಿವೆ.

ನ.22ರಂದು ರಾಜ್ಯಮಟ್ಟದ ವಸ್ತು ಪ್ರದರ್ಶನ ಮಳಿಗೆಗಳ ಉದ್ಘಾಟನೆಗೊಳ್ಳಲಿದ್ದು, ಮುಕ್ತ ಅವಕಾಶದ ಜತೆಗೆ ಮಾರಾಟ ಮತ್ತು ಪ್ರದರ್ಶನ ನಡೆಯಲಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: