ಪ್ರಮುಖ ಸುದ್ದಿ

ಅನಾರೋಗ್ಯದಿಂದ ಬಳಲುತ್ತಿದ್ದ ಬಂಡಾಯ ಸಾಹಿತಿ ಚನ್ನಣ್ಣ ವಾಲೀಕಾರ ನಿಧನ : ಸಿಎಂ ಬಿಎಸ್ ವೈ ಸಂತಾಪ

ರಾಜ್ಯ(ಕಲಬುರಗಿ)ನ.25:-   ಅನಾರೋಗ್ಯದಿಂದ ಬಳಲುತ್ತಿದ್ದ ಬಂಡಾಯ ಸಾಹಿತಿ ಚನ್ನಣ್ಣ ವಾಲೀಕಾರ  ಅವರು ನಿಧನರಾಗಿದ್ದಾರೆ.

ಅವರಿಗೆ 78ವರ್ಷ ವಯಸ್ಸಾಗಿತ್ತು.  ಅವರು ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.ಚಿಕಿತ್ಸೆ ಫಲಕಾರಿಯಾಗಿದೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಎರಡು ವರ್ಷದಿಂದ ಲಿವರ್‌ ಕ್ಯಾನ್ಸರ್‌ ನಿಂದ ಬಳಲುತ್ತಿದ್ದರು. ಒಂದು ವರ್ಷದಿಂದ ಅವರ ಆರೋಗ್ಯ ಕ್ಷೀಣಿಸಿತ್ತು ಎನ್ನಲಾಗಿದೆ.  ಮುಂಬೈ, ಹೈದರಾಬಾದ್‌, ಹಂಪಿ, ಬೆಂಗಳೂರು, ಧಾರವಾಡ, ಮೈಸೂರು, ಶಿವಮೊಗ್ಗದಲ್ಲಿ ಇರುವ ವಿಶ್ವವಿದ್ಯಾಲಯಗಳಲ್ಲಿಯೂ ಗ್ರಂಥಾಲಯ ಸದಸ್ಯರಾಗಿಯೂ ಕೆಲಸ ನಿರ್ವಹಿಸಿದ್ದಾರೆ.

ಹತ್ತಾರು ಪ್ರಬಂಧಗಳು, ನಾಲ್ಕು ಮಹಾಕಾವ್ಯಗಳು, 11 ಕವನ ಸಂಕನಲಗಳು, 12 ನಾಟಕಗಳು, 4 ಜನಪದ ಸಂಪ್ರಬಂಧಗಳು, 5 ಕಾದಂಬರಿಗಳು, ಬೆಳ್ಯಾ ಕಾದಂಬರಿ ಬರೆದಿದ್ದಾರೆ.

ಚನ್ನಣ್ಣ ವಾಲೀಕಾರ ಅವರು ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ. ವಾಲೀಕಾರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಸದಾ ದಮನಿತರ, ಶೋಷಿತರ ದನಿಯಾಗಿದ್ದ ಡಾ. ಚೆನ್ನಣ್ಣ ವಾಲೀಕಾರ ಅವರ ನಿಧನ ಅತೀವ ದುಃಖ ತಂದಿದೆ. ಸಾಹಿತ್ಯ ಕ್ಷೇತ್ರದ ಬೇರೆ ಬೇರೆ ಮಜಲುಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದವರು. ಅವರ ವಿಯೋಗದ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಮತ್ತು ಅವರ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: