ಪ್ರಮುಖ ಸುದ್ದಿಮನರಂಜನೆ

 ಕನ್ನಡದ ಖ್ಯಾತ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜುಗೆ  ಗೌರವ ಡಾಕ್ಟರೇಟ್ ಪ್ರದಾನ

ರಾಜ್ಯ(ಬೆಂಗಳೂರು)ನ.25:-  ಕನ್ನಡದ ಖ್ಯಾತ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜುಗೆ  ಗೌರವ ಡಾಕ್ಟರೇಟ್ ಪ್ರದಾನಿಸಲಾಗಿದೆ.

ಈ ಮೂಲಕ ಸಾಹಸ ನಿರ್ದೇಶಕರೊಬ್ಬರು ಈ ಗೌರವ ಪಡೆದ ಮೊದಲಿಗ ಎನಿಸಿಕೊಂಡಿದ್ದಾರೆ. ಮೂರು ದಶಕಗಳ ಕಾಲ ಕನ್ನಡ ಸೇರಿದಂತೆ ದಕ್ಷಿಣ ಭಾರತೀಯ ಭಾಷೆಗಳ ಚಿತ್ರರಂಗದಲ್ಲಿ ಸಾಹಸ ನಿರ್ದೇಶಕ, ನಿರ್ದೇಶಕ, ನಿರ್ಮಾಪಕ ಸೇರಿದಂತೆ ಹಲವು ವಿಭಾಗಗಳಲ್ಲಿ ಸೇವೆ ಸಲ್ಲಿಸಿರುವ ಮಂಜು ಅವರಿಗೆ ‘ವರ್ಚುವಲ್ ಆಫ್ ಯೂನಿವರ್ಸಿಟಿ ಫಾರ್ ಪೀಸ್ ಆಂಡ್ ಎಜುಕೇಷನ್’ ಸಂಸ್ಥೆ ಹಾಗೂ ಯುನೈಟೆಡ್ ನ್ಯಾಷನಲ್ ಆರ್ಗನೈಸೇಷನ್ ಜಂಟಿಯಾಗಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ತಮಗೆ ಗೌರವ ಡಾಕ್ಟರೇಟ್ ಸಂದ ಸಂತಸದ ಗಳಿಗೆಯನ್ನು ಮಂಜು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. (ಕೆ.ಎಸ್,ಎಸ್.ಎಚ್)

 

 

Leave a Reply

comments

Related Articles

error: