ದೇಶಪ್ರಮುಖ ಸುದ್ದಿ

ಬಿಜೆಪಿಗೆ ದೊಡ್ಡ ಶಾಕ್: ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ

ನವದೆಹಲಿ,ನ.27-ಮಹಾರಾಷ್ಟ್ರ ಸರ್ಕಾರದ ನಾಟಕ ಮುಂದುವರೆದಿದ್ದು, ಬಹುಮತ ಸಾಬೀತಿಗೂ ಮುನ್ನವೇ ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ ನೀಡುವ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ.

ಇಂದು ಸುಪ್ರೀಂ ಕೋರ್ಟ್ ನಾಳೆ ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತುಪಡಿಸುವಂತೆ ಸೂಚನೆ ನೀಡಿತ್ತು. ಅದಕ್ಕೂ ಮುನ್ನವೇ ಅಜಿತ್ ಪವಾರ್ ತಮ್ಮ ರಾಜೀನಾಮೆ ಪತ್ರವನ್ನು ಸಿಎಂ ದೇವೇಂದ್ರ ಫಡ್ನವಿಸ್ ಗೆ ಸಲ್ಲಿಸಿದ್ದಾರೆ.

ಬಹುಮತ ಸಾಬೀತಿಗೆ ಸಂಬಂಧಪಟ್ಟಂತೆ ಸಿಎಂ ದೇವೇಂದ್ರ ಫಡ್ನವಿಸ್ ಇಂದು ಅಪರಾಹ್ನ 3.30ಕ್ಕೆ ಸುದ್ದಿಗೋಷ್ಠಿ ಕರೆದಿದ್ದು, ಅವರು ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆಂಬ ಕುರಿತಂತೆ ತೀವ್ರ ಕುತೂಹಲ ಕೆರಳಿಸಿದೆ.

ಈ ನಡುವೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. (ಎಂ.ಎನ್)

Leave a Reply

comments

Related Articles

error: