ಮೈಸೂರು

ಅಭಿಮಾನಿ ಬಳಗದವರು ಸುದ್ದಿಗೋಷ್ಠಿಯಲ್ಲಿ ಮಾಡಿರುವ ಆರೋಪಗಳಿಗೆ ಮಾಜಿ ಮೇಯರ್ ಪುರುಷೋತ್ತಮ್ ತಿರುಗೇಟು

ಮೈಸೂರು,ನ.26:- ನಿನ್ನೆ ಶ್ರೀನಿವಾಸ್ ಪ್ರಸಾದ್ ಅಭಿಮಾನಿ ಬಳಗದವರು ಸುದ್ದಿಗೋಷ್ಠಿಯಲ್ಲಿ ಮಾಡಿರುವ ಆರೋಪಗಳಿಗೆ ಮಾಜಿ ಮೇಯರ್ ಪುರುಷೋತ್ತಮ್ ಇಂದು ತಿರುಗೇಟು ನೀಡಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿ. ಶ್ರೀನಿವಾಸ್ ಪ್ರಸಾದ್ ಅಭಿಮಾನಿ ಬಳಗ ರಾಜಕೀಯ ಲಾಭಕ್ಕಾಗಿ ದುರುದ್ದೇಶ ಪೂರ್ವಕವಾಗಿ ಆರೋಪಗಳನ್ನು ಮಾಡುತ್ತಿದ್ದು, ವೈಯುಕ್ತಿಕವಾಗಿ ಪ್ರಸಾದ್ ಅವರನ್ನು ನಿಂದಿಸಿಲ್ಲ, ಅವರ ಮೇಲೆ ಅಪಾರ ಗೌರವವಿದೆ ಎಂದು ಹೇಳಿದರು.ನಾನು ಕಾಂಗ್ರೆಸ್ ಪಕ್ಷದ ಏಜೆಂಟ್ ಆಗಿ ಕೆಲಸ ಮಾಡ್ತಿದ್ದೇನೆ ಎಂದಿದ್ದಾರೆ.ನಾನು ಪಕ್ಷದ ಏಜೆಂಟ್ ಅಲ್ಲ ಹಾಗೂ ಸ್ವಯಂಘೋಷಿತ ಹೋರಾಟಗಾರನಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ಸಂದರ್ಭದಲ್ಲಿ, ಡಾ. ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವ ಸಿ.ಎಂ.ಸಿ. ಎಂಬ ಖಾಸಗಿ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: