ಪ್ರಮುಖ ಸುದ್ದಿ

ಡಿ.1 ರಂದು ಪ್ರಜಾ ಪರಿವರ್ತನಾ ವೇದಿಕೆಯಿಂದ ವಿಚಾರ ಸಂಕಿರಣ

ರಾಜ್ಯ( ಮಡಿಕೇರಿ) ನ.27 :- ಪ್ರಜಾ ಪರಿವರ್ತನಾ ವೇದಿಕೆಯ ಜಿಲ್ಲಾ ಘಟಕದ ವತಿಯಿಂದ ಡಿ.1 ರಂದು ‘ಸ್ವತಂತ್ರ ಭಾರತದಲ್ಲಿ ಬಹುಜನರು ಅವಲಂಬಿತರು ಏಕೆ’ ಎಂಬ ವಿಷಯದ ಕುರಿತು ಒಂದು ದಿನದ ವಿಚಾರ ಸಂಕಿರಣ ನಡೆಯಲಿದೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಹೆಚ್.ಎಸ್.ಮುತ್ತಪ್ಪ ತಿಳಿಸಿದ್ದಾರೆ.
ನಗರದ ಬಾಲಭವನದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಪ್ರಜಾಪರಿವರ್ತನಾ ವೇದಿಕೆಯ ರಾಜ್ಯಾಧ್ಯಕ್ಷ ಬಿ.ಗೋಪಾಲ್ ಉದ್ಘಾಟಿಸಲಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಪ್ರೊ.ವಿ.ಷಣ್ಮುಗಂ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರಜಾಪರಿವರ್ತನಾ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್.ಪ್ರಕಾಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎ.ಹೊನ್ನಪ್ಪ, ಕೊಡಗು ಜಿಲ್ಲಾ ಸಹ ಕಾರ್ಯದರ್ಶಿ ಸತೀಶ್ ತಲ್ತರೆ ಶೆಟ್ಟಳ್ಳಿ, ತಾಲ್ಲೂಕು ಅಧ್ಯಕ್ಷ ಸಿ.ಕೆ.ರಮೇಶ್, ಪ್ರಧಾನ ಕಾರ್ಯದರ್ಶಿ ಜೆ. ಶಿವಪ್ಪ, ಸಹ ಕಾರ್ಯದರ್ಶಿ ಜಿ.ರಾಮ, ಸಂಘಟನಾ ಕಾರ್ಯದರ್ಶಿ ಐ.ಪಿ.ಪುಟ್ಟಸ್ವಾಮಿ, ಹೋಬಳಿ ಅಧ್ಯಕ್ಷ ಮುತ್ತ ಬೆಟ್ಟಗೇರಿ, ವಿರಾಜಪೇಟೆ ಮಹಿಳಾ ನೌಕರರ ಅಧ್ಯಕ್ಷ ರುಕ್ಮಿಣಿ ಭಾಗವಹಿಸಲಿದ್ದಾರೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: