ಮೈಸೂರು

ಕನ್ನಡ ಭಾಷೆಯನ್ನು ಕೇವಲ ಭಾವನಾತ್ಮಕವಾಗಿ ಬಳಸದೇ ರಚನಾತ್ಮಕವಾಗಿ ಹೆಚ್ಚು ಬಳಸುವ ಹಾಗೂ ಬೆಳೆಸುವ ಕಾರ್ಯ ಮಾಡಬೇಕಿದೆ : ಡಾ. ಗುಬ್ಬಿಗೂಡು ರಮೇಶ್

ಮೈಸೂರು,ನ.27:- ಜಿ ಎಸ್ ಎಸ್ ಎಸ್ ಮಹಿಳಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಿನ್ನೆ  ಕನ್ನಡ ರಾಜ್ಯೋತ್ಸವವನ್ನು ಕಾಲೇಜಿನ ರಂಗ ಮಂಟಪದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ  ಡಾ. ಗುಬ್ಬಿಗೂಡು ರಮೇಶ್  ಆಗಮಿಸಿದ್ದರು. ಈ ಸಂದರ್ಭ ಮಾತನಾಡಿದ ಅವರು ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಕೇವಲ ಭಾವನಾತ್ಮಕವಾಗಿ ಬಳಸದೇ ರಚನಾತ್ಮಕವಾಗಿ ಹೆಚ್ಚು ಬಳಸುವ ಹಾಗೂ ಬೆಳೆಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ಹೇಳಿದರು. ವಿಶ್ವದ ಯಾವುದೇ ಭಾಗದಲ್ಲಿ ನೆಲೆಸಿದ್ದರೂ ಕನ್ನಡತನವನ್ನು ಬಿಡದೇ ಕನ್ನಡ ಸಂಸ್ಕೃತಿ ಹಾಗೂ ಪರಂಪರೆಯ ಬೆಳವಣಿಗೆಗೆ ತಮ್ಮದೇ ಆದ ಕೊಡುಗೆಯನ್ನು ನೀಡಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ವಿಶೇಷವಾಗಿ ಮಹಿಳೆಯರ ಸಬಲೀಕರಣಕ್ಕೆ ಗೀತಾ ಶಿಶು ಶಿಕ್ಷಣ ಸಂಸ್ಥೆಯವರು ನೀಡುತ್ತಿರುವ ಪ್ರೋತ್ಸಾಹವನ್ನು ಶ್ಲಾಘಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿ ಎಸ್ ಎಸ್ ಎಸ್ (ರಿ) ಗೌರವ ಕಾರ್ಯದರ್ಶಿಗಳಾದ   ವನಜಾ ಬಿ ಪಂಡಿತ್‍  ಮಾತನಾಡಿ, ಎಲ್ಲರಿಗೂ 64ನೇ ರಾಜ್ಯೋತ್ಸವದ ಶುಭಾಶಯವನ್ನು ಕೋರಿದರು. ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರು ಸಾಂಸ್ಕೃತಿಕ ನೃತ್ಯ ಮತ್ತು ಗಾಯನದಿಂದ ಪ್ರೇಕ್ಷಕರನ್ನು ರಂಜಿಸಿದರು.

ಜಿ ಎಸ್ ಎಸ್ ಎಸ್ ಮಹಿಳಾ ತಾಂತ್ರಿಕ ಮಹಾವಿದ್ಯಾಲಯದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಜಿ ಎಸ್ ಎಸ್ ಎಸ್ (ರಿ) ಆಡಳಿತ ಮಂಡಳಿ ಸದಸ್ಯರಾದ  ಆರ್. ಕೆ. ಭರತ್, ಜಿ ಎಸ್ ಎಸ್ ಎಸ್ ಮಹಿಳಾ ತಾಂತ್ರಿಕ ಮಹಾವಿದ್ಯಾಲಯದ ಆಡಳಿತಾಧಿಕಾರಿಗಳಾದ  ಅನುಪಮ ಬಿ ಪಂಡಿತ್, ಸಂಸ್ಥೆಯ ಪ್ರಾಂಶುಪಾಲರಾದ ಡಾ. ಶಿವಕುಮಾರ್ ಎಂ, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಕಾಲೇಜಿನ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.       (ಎಸ್.ಎಚ್)

Leave a Reply

comments

Related Articles

error: