ಮೈಸೂರು

ನ.30 : ಉಗಮ ಚೇತನ ಟ್ರಸ್ಟ್ ವತಿಯಿಂದ ‘ಆದಿವಾಸಿಗಳ ಅಭಿವೃದ್ಧಿ ಯೋಜನೆ’ ಕಾರ್ಯಕ್ರಮ

ಮೈಸೂರು,ನ.28:- ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಉಗಮ ಚೇತನ ಟ್ರಸ್ಟ್ ಅದಿವಾಸಿ ಜನಾಂಗದ ಅಭಿವೃದ್ಧಿಗಾಗಿ ಶ್ರಮಿಸುತ್ತಾ ಬಂದಿದ್ದು, ನವೆಂಬರ್ 30ರಂದು ಬೆಳಿಗ್ಗೆ 10ಗಂಟೆಗೆ ಜೆಎಲ್ ಬಿ ರಸ್ತೆಯಲ್ಲೊರುವ ರೋಟರಿ ಹಾಲ್ ನಲ್ಲಿ ‘ಆದಿವಾಸಿಗಳ ಅಭಿವೃದ್ಧಿ ಯೋಜನೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮೈಸೂರಿನ ಪತ್ರಕರ್ತರ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಟ್ರಸ್ಟ್ ನ ಅಧ್ಯಕ್ಷರಾದ ಹೆಚ್.ಎನ್.ಪ್ರಿಯ ರಮೇಶ್ ಅಂದು ಬೆಳಿಗ್ಗೆ 10ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಪೊನ್ನಂಪೇಟೆ ಹಳ್ಳಿಗಟ್ಟು ಗ್ರಾಮದಿಂದ ಆದಿವಾಸಿ ಹೆಣ್ಣುಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇವರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಹೊಲಿಗೆ ತರಬೇತಿ ಕೇಂದ್ರವನ್ನು ಪ್ರಾರಂಭಿಸಿ ಉಚಿತ ತರಬೇತಿಯನ್ನು ನೀಡಲಾಗುವುದು ಎಂದರು.

ಆದಿವಾಸಿ ಜನಾಂಗದ ಹಿತಕ್ಕಾಗಿ ದುಡಿಯುತ್ತಿರುವ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ಸಮಾಜ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು . ಈ ಕಾರ್ಯಕ್ರಮವನ್ನು ಕೆ.ಎಂ.ವಿಶ್ವೇಶ್ವರಯ್ಯ ಕ್ಷೇಮಾಭಿವೃದ್ಧಿ ಸಂಘ ಹೂಟಗಳ್ಳಿ, ಎಂ.ಎಂ.ಹೋಲೆ ಸೇಲ್ ಮಾರ್ಕೆಟ್ ಪ್ರಾಯೋಜಿಸಿವೆ ಎಂದು ತಿಳಿಸಿದರು.

ಟ್ರಸ್ಟ್ ಯಾವುದೇ ನೋಂದಣಿ ಮಾಡದೆ ಸುಮಾರು ಎರಡು ವರ್ಷಗಳ ನಿರಂತರ ಸಮಾಜ ಸೇವೆಯಲ್ಲಿ ತೊಡಗಿದ್ದು 18/3/2019ರಲ್ಲಿ ನೋಂದಣಿ ಮಾಡಿ ಸಮಾಜದಲ್ಲಿ ಸೇವೆಯನ್ನು ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಮಹಿಳೆಯರು, ಮಕ್ಕಳು, ದಲಿತರು, ಅನಾಥರು ವೃದ್ಧರನ್ನು ಗಮನದಲ್ಲಿಟ್ಟುಕೊಂಡು ರೂಪುರೇಷೆಗಳನ್ನು ರಚಿಸಿ ಟ್ರಸ್ಟ್ ನ್ನು ಸಮಾಜದ ಮುಂದಿರಿಸಲಾಗುವುದು. ಬುಡಕಟ್ಟು ಜನಾಂಗದವರ ಏಳ್ಗೆಗಾಗಿ ಶ್ರಮಿಸಲಾಗುವುದು. ಅನಾಥ ಮತ್ತು ವೃದ್ಧಾಶ್ರಮಗಳನ್ನು ಸ್ಥಾಪಿಸುವುದು, ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಅಭಿವೃದ್ಧಿಪಡಿಸುವುದು, ವಿಕಲಚೇತನರ ಻ಭಿವೃದ್ಧಿಗಾಗಿ ಶ್ರಮಿಸುವುದು, ಪರಿಸರ ಸಂರಕ್ಷಣೆ, ನಿರುದ್ಯೋಗ ನಿರ್ಮೂಲನೆಗಾಗಿ ಶ್ರಮಿಸುವುದು, ಸರ್ಕಾರಿ ಸೌಲಭ್ಯಗಳ ಬಗ್ಗೆ ಜಾಗೃತಿ ಮತ್ತು ಮಾಹಿತಿ ನೀಡುವುದು ಟ್ರಸ್ಟಿನ ಉದ್ದೇಶವಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಮಂಜುಳಾ ರುದ್ರೇಗೌಡ, ಖಜಾಂಚಿ ಎನ್.ನಿಂಗರಾಜು ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: