ದೇಶಪ್ರಮುಖ ಸುದ್ದಿ

ಪ್ರಧಾನಿ ಮೋದಿಯನ್ನು ಭೇಟಿಯಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ

ನವದೆಹಲಿ,ನ.28-ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಸಿದ್ಧಗಂಗಾಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರು ಇಂದು ಭೇಟಿಯಾದರು.

ಸಂಸತ್ ಭವನದ ಪ್ರಧಾನಿ ಕಚೇರಿಯಲ್ಲಿ ಮೋದಿ ಅವರನ್ನು ಭೇಟಿ ಮಾಡಿದ‌ ಶ್ರೀಗಳು, ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ವಾರ್ಷಿಕ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು.

ಜನವರಿ 21 ರಂದು ತುಮಕೂರಿನ ಸಿದ್ದಗಂಗಾಮಠದಲ್ಲಿ ಶಿವೈಕ್ಯ ಶಿವಕುಮಾರ​ ಸ್ವಾಮೀಜಿಗಳ ವಾರ್ಷಿಕ ಪುಣ್ಯಾರಾಧನೆ ಸಮಾರಂಭವನ್ನು ಆಯೋಜಿಸಲಾಗಿದೆ.

ಜನವರಿ 21ಕ್ಕೆ ಶ್ರೀಗಳು ಸಾವನ್ನಪ್ಪಿ ಒಂದು ವರ್ಷ ತುಂಬುತ್ತದೆ. ಈ ಹಿನ್ನೆಲೆಯಲ್ಲಿ ಶ್ರೀಗಳ ವಾರ್ಷಿಕ ಪುಣ್ಯಾರಾಧನೆ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮೋದಿಯವರನ್ನು ಕೋರಿದರು.

ಪುಣ್ಯಾರಾಧನೆ ಸಂದರ್ಭ ಗಣರಾಜ್ಯೋತ್ಸವ ಕಾರ್ಯಕ್ರಮ‌ ಇರುವುದರಿಂದ ಸಿದ್ಧಗಂಗೆಗೆ ಬರುವುದು ಸಾಧ್ಯವಾಗಲಿಕ್ಕಿಲ್ಲ. ಆದರೂ ಬರಲು ಪ್ರಯತ್ನಿಸುವೆ ಎಂದು ಪ್ರಧಾನಿ ಹೇಳಿದ್ದಾರೆ.

ಕಾರ್ಯಕ್ರಮಕ್ಕೆ‌ ಮೊದಲೇ ಮಠಕ್ಕೆ ಭೇಟಿ ನೀಡಿ ತೆರಳುವಂತೆಯೂ ಕೋರಲಾಗಿದೆ ಎಂದು ಭೇಟಿಯ ನಂತರ ಶ್ರೀಗಳು ಸುದ್ದಿಗಾರರಿಗೆ ತಿಳಿಸಿದರು.

ಶಿವಕುಮಾರ ಸ್ವಾಮೀಜಿವರು ನಿಧನರಾಗಿದ್ದಾಗ ಪ್ರಧಾನಿ ನರೇಂದ್ರ ಮೋದಿಯವರು ಬಂದಿರಲಿಲ್ಲ. ಆಗ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​​​ ಬಂದಿದ್ದರು. (ಎಂ.ಎನ್)

 

 

Leave a Reply

comments

Related Articles

error: