ಮೈಸೂರು

ತಂತ್ರಜ್ಞಾನಗಳನ್ನು ಸರಿಯಾಗಿ ಉಪಯೋಗಿಸಿಕೊಳ್ಳಿ : ಡಾ.ಎಚ್.ಎಸ್.ಪ್ರಕಾಶ್

 

ಮೈಸೂರು ಮಕ್ಕಳ ಕೂಟ ಮತ್ತು ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಮಹಾವಿದ್ಯಾಲಯದಲ್ಲಿ ಜೈವಿಕ ತಂತ್ರಜ್ಞಾನ ಮತ್ತು ಜೀವ ವಿಜ್ಞಾನದ ಗಡಿ  ಕುರಿತ ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು.

ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿಯ ಜೈವಿಕ ತಂತ್ರಜ್ಞಾನ  ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಎಚ್.ಎಸ್.ಪ್ರಕಾಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು

ಜೈವಿಕ ತಂತ್ರಜ್ಞಾನದಲ್ಲಿ ಮಹಿಳೆಯರಿಗೆ ವಿಫುಲ ಅವಕಾಶವಿದ್ದು, ಸದುಪಯೋಗಪಡಿಸಿಕೊಳ್ಳಬೇಕು. ಬೆಂಗಳೂರಿನಲ್ಲಿ ಜೈವಿಕ ತಂತ್ರಜ್ಞಾನದ ಹಬ್ ಇದ್ದು, ಇಲ್ಲಿ ಶೇ.40ರಷ್ಟು ಹುದ್ದೆಗಳು ಖಾಲಿ ಇವೆ. ಇದನ್ನು ಮಹಿಳೆಯರು ಉಪಯೋಗಿಸಿಕೊಳ್ಳಬೇಕು ಎಂದರು. ವಿದ್ಯಾರ್ಥಿಗಳು ಅನ್ವೇಷಣೆಯತ್ತ ಗಮನಹರಿಸಬೇಕು. ಜೀವನದಲ್ಲಿ ಏನನ್ನಾದರೂ ಸಾಧಿಸುವ ಛಲ ಹೊಂದಬೇಕು  ಎಂದು ತಿಳಿಸಿದರು.ಈ ಹಿಂದೆ ನಮಗೆ ಯಾವುದೇ ಕೆಲಸ ಮಾಡಬೇಕೆಂದರೂ ಸಾಕಷ್ಟು ಸಮಸ್ಯೆ ಇತ್ತು. ಯಂತ್ರಗಳ ಕೊರತೆ ಇತ್ತು. ಆದರೆ ಇಂದು, 10 ವರ್ಷಗಳ ನಂತರ ಹೊಸ ತಂತ್ರಜ್ಞಾನಗಳು ಬಂದಿವೆ. ಇಂಟರ್ನೆಟ್ ಮೂಲಕ ವಿದ್ಯಾರ್ಥಿಗಳು ಹೊಸ ಅನ್ವೇಷಣೆ ನಡೆಸಬೇಕು ಎಂದು ಸಲಹೆ ನೀಡಿದರು. ಡಿ.ಎನ್.ಎ ತಂತ್ರಜ್ಞಾನ ಇವೆಲ್ಲವೂ ಹೊಸ ಆವಿಷ್ಕಾರವಾಗಿದೆ. ಮೈಸೂರು ವಿವಿಯಲ್ಲಿ ಈ ವಿಷಯವಾಗಿ ಪಿಹೆಚ್‌ಡಿ ಪಡೆಯುವ ಅವಕಾಶ ಇದೆ. ಇದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ಮೈಸೂರು ವಿವಿಯ ಡಾ.ಕೆ.ಡಿಸೋಜಾ, ಪ್ರಾಂಶುಪಾಲ ಪ್ರೊ.ಕೆ.ವಿ.ದಾಮೋದರ, ಪ್ರೊ.ಮಾರ್ಟಿನ್, ಡಾ.ಎಂ.ಸಿ.ಹರೀಶ್, ಡಾ.ಹನುಮಂತಪ್ಪ ಮಕರಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: