ಮೈಸೂರು

ಅಧ್ಯಯನ ಕೈಪಿಡಿ ಬಿಡುಗಡೆ  

ಮೈಸೂರು,ನ.29:- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ 10 ದಿನಗಳ ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷಾ ತರಬೇತಿ ಕಾರ್ಯಾಗಾರದ ಇತ್ತೀಚೆಗೆ ನಡೆದ ಮುಕ್ತಾಯದ ಸರಳ ಸಮಾರಂಭದಲ್ಲಿ ಕುಲಸಚಿವ ಪ್ರೊ.ರಮೇಶ್ .ಬಿ ಅವರು ಅಧ್ಯಯನ ಕೈಪಿಡಿಯನ್ನು ಬಿಡುಗಡೆ ಮಾಡಿದರು.

ಈ ಸಂದರ್ಭ ಹಣಕಾಸು ಅಧಿಕಾರಿ ಡಾ.ಎ.ಖಾದರ್ ಪಾಷ, ಸಂಯೋಜನಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಮತ್ತು ಪರಿಸರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಜೆ.ಎಸ್.ಚಂದ್ರಶೇಖರ್ ಹಾಜರಿದ್ದರು. (ಎಸ್.ಎಚ್)

Leave a Reply

comments

Related Articles

error: