ಪ್ರಮುಖ ಸುದ್ದಿ

ಜ.ತಿಮ್ಮಯ್ಯ ಪಬ್ಲಿಕ್ ಶಾಲಾ ವಾರ್ಷಿಕೋತ್ಸವ ಸಮಾರೋಪ : ಶಿಕ್ಷಕ ವೃಂದದ ಪ್ರಯತ್ನಕ್ಕೆ ಪೋಷಕರ ಸಹಕಾರ ಅಗತ್ಯ : ಉಪ ನಿರ್ದೇಶಕ ಪಿ.ಎಸ್.ಮಚ್ಚಾಡೊ

ರಾಜ್ಯ( ಮಡಿಕೇರಿ) ಡಿ.1:- ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಲು ಶ್ರಮ ಪಡುವ ಶಿಕ್ಷಕ ವೃಂದದ ಪ್ರಯತ್ನಕ್ಕೆ ಪೋಷಕರು ಪ್ರೋತ್ಸಾಹ ಮತ್ತು ಸಹಕಾರ ನೀಡಿದಾಗ ಮಾತ್ರ ತಮ್ಮ ಮಕ್ಕಳಲ್ಲಿ ಶೈಕ್ಷಣಿಕ ಸಫಲತೆಯನ್ನು ಕಾಣಲು ಸಾಧ್ಯವೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್.ಮಚ್ಚಾಡೊ ಅಭಿಪ್ರಾಯಪಟ್ಟಿದ್ದಾರೆ.
ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ 21ನೇ ವಾರ್ಷಿಕೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪೋಷಕರು ತಮ್ಮ ಮಕ್ಕಳ ಅವಶ್ಯಕತೆಗಳನ್ನು ಪೂರೈಸುತ್ತಾರೆ, ಆದರೆ ಗುರುಗಳು ವಿದ್ಯಾರ್ಥಿಗಳಲ್ಲಿರುವ ಅಂಧಕಾರವನ್ನು ಕಳೆದು ಉತ್ತಮ ಮಾರ್ಗದರ್ಶನದಲ್ಲಿ ನಡೆಸುತ್ತಾರೆ. ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುವ ಶಿಕ್ಷಕರ ಮೇಲೆ ಪೋಷಕರ ಅಭಿಮಾನವಿರಲಿ ಎಂದರು.
ಹಿಂದೆ ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಂಡಿದ್ದರು. ಆದರೆ ಇಂದು ಮೊಬೈಲ್ ಹವ್ಯಾಸದಿಂದ ಓದುವ ಆಸಕ್ತಿಯೇ ಕಡಿಮೆಯಾಗಿದ್ದು, ಶೈಕ್ಷಣಿಕ ಬೆಳವಣಿಗೆ ಕುಂಠಿತವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಪೋಷಕರು ತಮ್ಮ ಮೊಬೈಲ್‍ಗಳನ್ನು ಮಕ್ಕಳಿಗೆ ನೀಡುವ ಬದಲು ಅವರ ಆಸಕ್ತಿಯ ಕ್ಷೇತ್ರಗಳಲ್ಲಿ ಹೆಚ್ಚು ಪ್ರೋತ್ಸಾಹ ನೀಡಬೇಕು. ವಿದ್ಯಾರ್ಥಿಗಳು ಪೋಷಕರ ಹಾಗೂ ಶಿಕ್ಷಕರ ಮಾರ್ಗದರ್ಶನದಲ್ಲಿ ನಾಡಿಗೆ ಕೀರ್ತಿಯನ್ನು ತರಬೇಕು ಎಂದು ಮಚ್ಚಾಡೊ ಕಿವಿಮಾತು ಹೇಳಿದರು.
ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೆ.ಎಸ್.ದೇವಯ್ಯ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಿ ಸಮಾಜದಲ್ಲಿ ಗುರುತಿಸಿಕೊಳ್ಳುವುದೇ ಶಿಕ್ಷಕರಿಗೆ ನೀಡುವ ಗುರುದಕ್ಷಿಣೆಯಾಗಿದೆ ಎಂದು ಹೇಳಿದರು. ಪೋಷಕರು ಹಾಗೂ ಶಿಕ್ಷಕರ ನಡುವೆ ಸಮನ್ವಯತೆ ಇದ್ದಾಗ ವಿದ್ಯಾರ್ಥಿಗಳ ಬೇಕು, ಬೇಡಿಕೆಗಳು ಸುಲಭವಾಗಿ ಅರ್ಥವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲಾಭಿವೃದ್ಧಿ ಮಂಡಳಿ ಹಾಗೂ ಕೊಡವ ಸಮಾಜದ ಮೂಲಕ ಶಾಲೆಗೆ ಅಗತ್ಯ ಸಹಕಾರ ನೀಡುವುದಾಗಿ ದೇವಯ್ಯ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ 2018ನೇ ಸಾಲಿನ 10ನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆದು ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯಾಧ್ಯಕ್ಷರು ಹಾಗೂ ಮಡಿಕೇರಿ ಕೊಡವ ಸಮಾಜ ಉಪಾಧ್ಯಕ್ಷದ ಚೋವಂಡ ಡಿ. ಕಾಳಪ್ಪ, ಆಡಳಿತಾಧಿಕಾರಿ ಎಂ.ಎ.ಪೊನ್ನಮ್ಮ, ಪ್ರಾಂಶುಪಾಲೆ ಬಿ.ಎಂ.ಸರಸ್ವತಿ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಡಾ.ಪಾರ್ವತಿ ಅಪ್ಪಯ್ಯ ಹಾಗೂ ಪೋಷಕರು ಹಾಜರಿದ್ದರು.
ಸಭಾ ಕಾರ್ಯಕ್ರಮದ ನಂತರ ನಡೆದ ವಿದ್ಯಾರ್ಥಿಗಳ ವರ್ಣರಂಜಿತ ಸಾಂಸ್ಕøತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: