ಪ್ರಮುಖ ಸುದ್ದಿ

ಒಂದೇ ರಾತ್ರಿಯಲ್ಲಿ ಎರಡು ದೇವಸ್ಥಾನಗಳಲ್ಲಿ ಕಳ್ಳರ ಕೈಚಳಕ : ದೇವಾಲಯದ ಕಾಣಿಕೆ ಹುಂಡಿ ಒಡೆದು ಹಣ ದೋಚಿ ಪರಾರಿ

ರಾಜ್ಯ(ತುಮಕೂರು)ಡಿ.2:- ಒಂದೇ ರಾತ್ರಿಯಲ್ಲಿ ಎರಡು ದೇವಸ್ಥಾನಗಳಲ್ಲಿ ಕಳ್ಳರು ಕೈಚಳಕ ತೋರಿದ್ದು,  ದೇವಾಲಯದ ಕಾಣಿಕೆ ಹುಂಡಿ ಒಡೆದು ಸರಣಿ ಕಳ್ಳತನ ಮಾಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ  ಚಿಕ್ಕಯ್ಯನಪಾಳ್ಯ ಮತ್ತು ಲಕ್ಕೇನಹಳ್ಳಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.  ಚಿಕ್ಕಯ್ಯನಪಾಳ್ಯ ಗ್ರಾಮದಲ್ಲಿರುವ ಶ್ರೀ ಲಕ್ಷೀ ವೆಂಕಟೇಶ್ವರ ಸ್ವಾಮಿ ದೇವಾಲಯ ಮತ್ತು ಲಕ್ಕೇನಹಳ್ಳಿ ಗ್ರಾಮದಲ್ಲಿರುವ ಶ್ರೀ ಮಾರಮ್ಮ ದೇವಿ ದೇವಸ್ಥಾನದಲ್ಲಿ ನಿನ್ನೆ ರಾತ್ರಿ ಕಳ್ಳರ ಗುಂಪು ಸರಣಿ ಕಳ್ಳತನ ಮಾಡಿದ್ದು, ದೇವಸ್ಥಾನದ ಹುಂಡಿಗಳನ್ನು ಒಡೆದು ಹಣ ತೆಗೆದು ಪರಾರಿಯಾಗಿದ್ದಾರೆ.

ಶ್ರೀ ಲಕ್ಷೀ ವೆಂಕಟೇಶ್ವರ ಸ್ವಾಮಿ ದೇವಾಲಯ ಹುಂಡಿ ಒಡೆದು ಅದರಲ್ಲಿನ ಅಂದಾಜು 2 ಲಕ್ಷ ರೂ.ಗೂ ಹೆಚ್ಚು ಹಣ ಕಳ್ಳತನ ನಡೆಸಲಾಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಶ್ರೀ ಮಾರಮ್ಮ ದೇವಿ ದೇವಸ್ಥಾನದಲ್ಲಿ ಹುಂಡಿ ಒಡೆದು ಅದರಲ್ಲಿನ ಹಣವನ್ನು  ದೋಚಿ ಖದೀಮರು ಎಸ್ಕೇಪ್ ಆಗಿದ್ದಾರೆ.

ಎರಡು ಗ್ರಾಮದಲ್ಲಿ ಒಂದೇ ದಿನ ಕಳ್ಳತನ ನಡೆದಿದ್ದು ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಮೊದಲೇ ಚಿರತೆ ಕಾಟದಿಂದ ನಿದ್ದೆಗೆಟ್ಟಿರುವ ಈ ಗ್ರಾಮಗಳಲ್ಲಿ ಸದ್ಯ ಕಳ್ಳರು ತಮ್ಮ ಕೈಚಳಕವನವನ್ನು ತೋರಿಸಿರುವುದು ಈ ಭಾಗದ ಗ್ರಾಮಸ್ಥರಲ್ಲಿ ವ್ಯಾಪಕ ಚರ್ಚೆಗೆ ಗುರಿಯಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಹೆಬ್ಬೂರು ಪೊಲೀಸರು ಪರಿಶೀಲನೆ ನಡೆಸಿ. ಪ್ರಕರಣ ದಾಖಲಿಸಿಕೊಂಡಿದ್ದು, ಕಳ್ಳರಿಗಾಗಿ ಬಲೆ ಬೀಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: