
ಮೈಸೂರು
ಸಾಧನೆಗೈದ ವಿಜಯ ವಿಠ್ಠಲ ವಿದ್ಯಾರ್ಥಿಗಳು : ರಾಜ್ಯ ಮಟ್ಟಕ್ಕೆ ಆಯ್ಕೆ
ಮೈಸೂರು,ಡಿ.2:- ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಇತ್ತೀಚೆಗೆ ಚಿಕ್ಕಮಗಳೂರಿನಲ್ಲಿ ನಡೆದ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜಯ ವಿಠ್ಠಲ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಭರತ್ ಎಸ್ ಮತ್ತು ಶ್ರೇಯಸ್.ಡಿ.ಎ. ಸಾಮಾನ್ಯಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ. (ಜಿ.ಕೆ,ಎಸ್.ಎಚ್)