ಕ್ರೀಡೆದೇಶಪ್ರಮುಖ ಸುದ್ದಿ

ಬೆಂಗಳೂರು ಟೆಸ್ಟ್‌ ಪಂದ್ಯ ; ಬ್ಯಾಟಿಂಗ್‌ ಆಯ್ದುಕೊಂಡ ಭಾರತ

ಬೆಂಗಳೂರು : ಭಾರತ–ಆಸ್ಟ್ರೇಲಿಯಾ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ.

ಇಂದಿನಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಗೆಲ್ಲಬೇಕಾದ ಒತ್ತಡಕ್ಕೆ ಭಾರತ ಸಿಲುಕಿದೆ. ಸತತವಾಗಿ 19 ಟೆಸ್ಟ್‍ಗಳಲ್ಲಿ ಗೆದ್ದಿದ್ದ ಭಾರತ ತಂಡಕ್ಕೆ ಸ್ಟೀವನ್ ಸ್ಮಿತ್ ನಾಯಕತ್ವದ ಆಸ್ಟ್ರೇಲಿಯಾ ಬಳಗವು ಪುಣೆಯಲ್ಲಿ ನಡೆದ ಮೊದಲ ಟೆಸ್ಟ್‍ ಪಂದ್ಯದಲ್ಲಿ ಹೀನಾಯ ಸೋಲುಣಿಸಿತ್ತು. ಕೊಹ್ಲಿ ಪಡೆಯ ಗೆಲುವಿನ ಓಟಕ್ಕೆ ತಡೆಯೊಡ್ಡಿ 333 ರನ್‌ಗಳ ಗೆಲುವು ಸಾಧಿಸಿತ್ತು.

ವಿಶ್ವದ ಅತ್ಯುತ್ತಮ ಆಟಗಾರರಲ್ಲಿ ಒಬ್ಬರಾದ ಭಾರತದ ತಂಡದ ನಾಯಕ ವಿರಾಟ್ ಕೊಹ್ಲಿ, ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಪುಣೆಯಲ್ಲಿ ನಡೆದ ಮೊದಲ ಪಂದ್ಯದ ಸೋಲಿನಿಂದ ಭಾರತ ಜಾಗೃತವಾಗಿದ್ದು, ಎರಡನೇ ಟೆಸ್ಟ್‌ ಪಂದ್ಯದಲ್ಲಿ ಜಯ ಸಾಧಿಸಲಿದ್ದೇವೆ ಎಂದಿದ್ದಾರೆ.

Leave a Reply

comments

Related Articles

error: