ಮೈಸೂರು

ಪಶುವೈದ್ಯೆಯ ಮೇಲೆ ನಡೆದ ಅತ್ಯಾಚಾರ, ಕೊಲೆ ಖಂಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಡಿ.4:- ಹೈದ್ರಾಬಾದ್ ನಲ್ಲಿ ಪಶುವೈದ್ಯೆಯ ಮೇಲೆ ನಡೆದ ಅತ್ಯಾಚಾರ, ಕೊಲೆ ಖಂಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ನ ದುರ್ಗಾವಾಹಿನಿ, ಮಾತೃಶಕ್ತಿ ಮತ್ತು ಬಜರಂಗದಳ ವತಿಯಿಂದ ಪ್ರತಿಭಟನೆ ನಡೆಯಿತು.

ಜಿಲ್ಲಾಧಿಕಾರಿಗಳ ಕಛೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಇಂದು ಸಮಾಜದಲ್ಲಿ ಮನೆಯಿಂದ ಹೊರಗೆ ಹೋಗುವ ಹೆಣ್ಣುಮಗಳು ಸುರಕ್ಷಿತವಾಗಿ ಮನೆಗೆ ತಲುಪುತ್ತಾರೆಂಬ ನಂಬಿಕೆಯೇ ಹೊರಟು ಹೋಗುತ್ತಿದೆ. ಹೆಣ್ಣುಮಕ್ಕಳನ್ನು ಹೊರಗೆ ಕಳುಹಿಸಲೂ ಭಯವಾಗುತ್ತದೆ. ಹೀಗಾಗಿ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಪ್ರಕರಣದ ಆರೋಪಿಗಳು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಸಹ ಯಾವುದೇ ಪ್ರಭಾವಕ್ಕೆ ಒಳಗಾಗದೇ ಆದಷ್ಟು ಶೀಘ್ರ ತನಿಖೆ ನಡೆಸಿ ನಿಷ್ಪಕ್ಷ ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚನೆ ನೀಡಿ, ನ್ಯಾಯಾಲಯದಲ್ಲಿ ಆದಷ್ಟು ಶೀಘ್ರವಾಗಿ ವಿಚಾರಣೆ ನಡೆಸಿ ಅಪರಾಧಿಗಳನ್ನು ನೇರ ಗಲ್ಲು ಶಿಕ್ಷೆಗೆ ಒಳಪಡಿಸಿ, ಹೆಣ್ಣುಮಕ್ಕಳು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರೆ ಅಥವಾ ಸಂಜೆ ಕೆಲಸ ಬಿಡುವಾಗ ತಡವಾಗುವಂತಹ ಸಂದರ್ಭದಲ್ಲಿ ಅವರನ್ನು ಸುರಕ್ಷಿತವಾಗಿ ಮನೆಗೆ ತಲುಪಿಸುವುದರ ಹೊಣೆಯನ್ನು ಉದ್ಯೋಗದಾತರು ಹೊರುವಂತೆ ಆದೇಶ ನೀಡುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವಿ.ಬಿ ಪ್ರದೀಶ್ ಕುಮಾರ್, ಮಾತೃಶಕ್ತಿ ಸಂಯೋಜಕಿ, ದುರ್ಗಾವಾಹಿನಿ ಸಂಯೋಜಕಿ, ಬಜರಂಗದಳ ಸಂಯೋಜಕ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.  (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: