ಮನರಂಜನೆ

`ರಹದಾರಿ’ ಮೂಲಕ ಕಮ್ ಬ್ಯಾಕ್ ಮಾಡಿದ ಶ್ವೇತಾ ಶ್ರೀವಾತ್ಸವ್

ಬೆಂಗಳೂರು,ಡಿ.4-ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿದ್ದ ನಟಿ ಶ್ವೇತಾ ಶ್ರೀವಾತ್ಸವ್ ‘ರಹದಾರಿ’ ಸಿನಿಮಾದ ಮೂಲಕ ಕಮ್ ಬ್ಯಾಕ್ ಮಾಡುತ್ತಿದ್ದಾರೆ.

ಮೂರು ವರ್ಷಗಳ ನಂತರ ಸಿನಿಮಾ ಮಾಡುತ್ತಿದ್ದೇನೆ. ತುಂಬಾ ಸಂತಸದಲ್ಲಿ ಇದ್ದೇನೆ. ನಿರ್ದೇಶಕ ಗಿರೀಶ್ ಕಥೆ ಹೇಳಿದ ರೀತಿ ನನಗೆ ತುಂಬಾ ಇಷ್ಟ ಆಯಿತು. ನಾನು ಸ್ವಲ್ಪ ಚ್ಯೂಸಿ. ನನಗೆ ಸಿಕ್ಕಿರುವ ಪಾತ್ರವನ್ನು ಹೀರೋ ಕೂಡ ಮಾಡಬಹುದಿತ್ತು. ಆದ್ರೆ, ನನಗೆ ಆ ಪಾತ್ರ ಕೊಟ್ಟಿರುವುದು ಖುಷಿ ತಂದಿದೆ ಎಂದಿದ್ದಾರೆ ಶ್ವೇತಾ ಶ್ರೀವಾತ್ಸವ್.

`ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಚಿತ್ರದ ಮೂಲಕ ನಿರ್ದೇಶಕ ಸುನಿ, ನಟ ರಕ್ಷಿತ್ ಶೆಟ್ಟಿ ಮತ್ತು ನಟಿ ಶ್ವೇತಾ ಶ್ರೀವಾತ್ಸವ್ ಸ್ಯಾಂಡಲ್ ವುಡ್ ನಲ್ಲಿ ಹೊಸ ಅಲೆ ಎಬ್ಬಿಸಿದ್ದರು. ಸುನಿ, ರಕ್ಷಿತ್ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಿದ್ದಾರೆ. ಶ್ವೇತಾ ‘ಫೇರ್ ಅಂಡ್ ಲವ್ಲಿ’, ‘ಕಿರಗೂರಿನ ಗಯ್ಯಾಳಿಗಳು’ ಚಿತ್ರಗಳಲ್ಲಿ ಅಭಿನಯಿಸಿದ್ದರು.

ಆ ಬಳಿಕ ಹೆಣ್ಣು ಮಗುವಿಗೆ ಜನ್ಮ ನೀಡಿದ ಶ್ವೇತಾ ಮಗುವಿನ ಆರೈಕೆಗಾಗಿ ಮೂರು ವರ್ಷಗಳ ಕಾಲ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿದ್ದರು. ಇದೀಗ ರಹದಾರಿ ಸಿನಿಮಾ ಮೂಲಕ ಚಿತ್ರರಂಗದಲ್ಲಿ ಸೆಕೆಂಡ್ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ.

`ರಹದಾರಿ’ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗಷ್ಟೇ ನಡೆದಿದೆ. ಸದ್ಯದಲ್ಲೇ ಚಿತ್ರದ ಶೂಟಿಂಗ್ ಶುರುವಾಗಲಿದೆ. ಗಿರೀಶ್ ವೈರಮುಡಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸಿನಿಮಾದಲ್ಲಿ ಪೊಲೀಸ್ ಪಾತ್ರದಲ್ಲಿ ಶ್ವೇತಾ ನಟಿಸುತ್ತಿದ್ದಾರೆ. (ಎಂ.ಎನ್)

Leave a Reply

comments

Related Articles

error: