ಮೈಸೂರು

ಹರಿಹರ ರಾಜನಹಳ್ಳಿಯಲ್ಲಿ ಮಹರ್ಷಿ ವಾಲ್ಮಿಕಿ ಗುರುಪೀಠದ 2ನೇ ಜಾತ್ರಾಮಹೋತ್ಸವ : ಮೈಸೂರು ನಗರದ ಜಾತ್ರಾ ಸಮಿತಿ ಅಧ್ಯಕ್ಷರಾಗಿ ಲೋಕೇಶ್ ಪಿಯಾ ಆಯ್ಕೆ

ಮೈಸೂರು,ಡಿ.5:- ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಮಹರ್ಷಿ ವಾಲ್ಮಿಕಿ ಗುರುಪೀಠದ 2ನೇ ಜಾತ್ರಾಮಹೋತ್ಸವವನ್ನು ಆಯೋಜಿಸಲಾಗಿದ್ದು, ಮೈಸೂರು ನಗರದ ಜಾತ್ರಾ ಸಮಿತಿ ಅಧ್ಯಕ್ಷರಾಗಿ ಸರ್ವಾನುಮತದಿಂದ ಮೈಸೂರು ನಗರ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ಅವರನ್ನು ಆಯ್ಕೆ ಮಾಡಲಾಗಿದೆ.

2020 ಫೆಬ್ರವರಿ 8 ಮತ್ತು 9 ರಂದು ಎರಡು ದಿನಗಳ ಕಾಲ ಈ ಜಾತ್ರಾ ಮಹೋತ್ಸವ  ನಡೆಯಲಿದೆ.   ಜಾತ್ರಾ ಸಮಿತಿಯ ರಾಜ್ಯ ಅಧ್ಯಕ್ಷರನ್ನಾಗಿ ಬಿ.ಶ್ರೀರಾಮುಲು ಅವರನ್ನು ಆಯ್ಕೆ ಮಾಡಲಾಗಿದೆ. ಈ ನಡುವೆ ಜಾತ್ರಾ ಮಹೋತ್ಸವ ಕಾರ್ಯಕ್ರಮಕ್ಕೆ ಹಾಗೂ ಮಠದ ಶ್ರೇಯೋಭಿವೃದ್ದಿಗೆ  ಮೈಸೂರು ಪಾಲಿಕೆ ಸದಸ್ಯ ಲೋಕೇಶ್ ಪಿಯಾ ಅವರು ವೈಯುಕ್ತಿಕವಾಗಿ 50 ಸಾವಿರ ರೂ. ದೇಣಿಗೆ ನೀಡಿದ್ದಾರೆ. ಅಲ್ಲದೆ ನಾಯಕ ಸಮಾಜ ಸೇರಿ ಇನ್ನಿತರ ಸಮಾಜದಿಂದ ಕೈಲಾದಷ್ಟು ದೇಣಿಗೆ ಸಂಗ್ರಹಿಸಿ ಮಠಕ್ಕೆ ನೀಡಲಿದ್ದಾರೆ.

ಜಾತ್ರಾ ಮಹೋತ್ಸವಕ್ಕೆ ಕಳೆದ ಬಾರಿ 10 ಲಕ್ಷ ಜನ ಸೇರಿದ್ದರು. ಈ ಬಾರಿ 20 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಹಾಗೆಯೇ ಕಳೆದ  ಬಾರಿ ಜಾತ್ರಾ ಸಮಿತಿಯ ರಾಜ್ಯ ಅಧ್ಯಕ್ಷರನ್ನಾಗಿ ಸತೀಶ್ ಜಾರಕಿಹೊಳಿ ಅವರನ್ನು ನೇಮಿಸಲಾಗಿತ್ತು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: