ಪ್ರಮುಖ ಸುದ್ದಿ

15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ : ಬೆಳಿಗ್ಗೆ 7ಗಂಟೆಯಿಂದಲೇ  ಮತದಾನ ಆರಂಭ

ರಾಜ್ಯ(ಬೆಂಗಳೂರು)ಡಿ.5:- ಇಂದು ಬೆಳಿಗ್ಗೆ 7ಗಂಟೆಯಿಂದಲೇ  ರಾಜ್ಯದಲ್ಲಿ ನಡೆಯುತ್ತಿರುವ  15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ   ಮತದಾನ ಆರಂಭವಾಗಿದೆ.

ಬಿಜೆಪಿ ಮತ್ತು ವಿರೋಧ ಪಕ್ಷದ ಕಾಂಗ್ರೆಸ್ ಮತ್ತು ಜನತಾದಳ-ಸೆಕ್ಯುಲರ್ (ಜೆಡಿ-ಎಸ್) ಎಲ್ಲಾ 15 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದ್ದು ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದ್ದು, ಈ ಕ್ಷೇತ್ರಗಳಲ್ಲಿ ಒಟ್ಟು 128 ಸ್ವತಂತ್ರರು ಸೇರಿದಂತೆ 248 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಮತದಾರರು ಇಂದು ಬೆಳಗ್ಗೆಯಿಂದಲೇ ಉತ್ಸುಕರಾಗಿ ಬಂದು ಮತ ಚಲಾಯಿಸುತ್ತಿದ್ದಾರೆ.  ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರ್, ರಾಣಿಬೆನ್ನೂರ್, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್. ಪುರ, ಯಶ್ವಂತಪುರ, ಮಹಾಲಕ್ಷ್ಮಿ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆ.ಆರ್. ಪೇಟೆ ಮತ್ತು ಹುಣಸೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆ ನಡೆದಿದ್ದು, ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದೆ.  ಸಂಜೆ 6 ಗಂಟೆವರೆಗೂ ಮತದಾನ ನಡೆಯಲಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: