ಮೈಸೂರು

ನಿರೀಕ್ಷೆ ಸಂಸ್ಥೆಗೆ ಪಾಲಿಕೆ ವತಿಯಿಂದ 50,000ರೂ ಚೆಕ್ ವಿತರಣೆ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ನಿರೀಕ್ಷೆ ವಿಶೇಷ ಮಕ್ಕಳ ಶಾಲೆಯಲ್ಲಿ ಶನಿವಾರ ಮೈಸೂರು ಮಹಾನಗರ ಪಾಲಿಕೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಇವರ ಸಹಯೋಗದೊಂದಿಗೆ ವಿಶೇಷ ಮಕ್ಕಳ ಪೋಷಕರಿಗೆ ಹಾಗೂ ಶಿಕ್ಷಕರಿಗೆ ನಡವಳಿಕೆ ಸುಧಾರಣೆ ಕುರಿತು ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಕಾರ್ಯಾಗಾರವನ್ನು ಮಹಾಪೌರ ಎಂ.ಜೆ.ರವಿಕುಮಾರ್ ಗಿಡಕ್ಕೆ ನೀರುಣಿಸುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ನಗರ ಪಾಲಿಕೆ ವತಿಯಿಂದ 50,000 ರೂ.ಗಳ ಚೆಕ್ ಹಾಗೂ ಮಹಾಪೌರ ಎಂ.ಜೆ ರವಿಕುಮಾರ್ ಅವರು ವೈಯಕ್ತಿವಾಗಿ 10,000 ರೂ. ಗಳನ್ನು ಸಂಸ್ಥೆಗೆ ನೀಡಿದರು.

ಈ ಸಂದರ್ಭ ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಮಹದೇವಪ್ಪ, ತೆರಿಗೆ ನಿರ್ಧರಣೆ ಹಣಕಾಸು ಮತ್ತು  ಅಫೀಲುಗಳ ಸ್ಥಾಯಿ ಸಮಿತಿಯ ಅಧ್ಯಕ್ಷ ಕೆ.ವಿ. ಮಲ್ಲೇಶ್ ಹಾಗೂ ನಗರ ಪಾಲಿಕೆ ಸದಸ್ಯ ಎಂ.ಕೆ. ಶಂಕರ್  ಮತ್ತಿತರರು ಭಾಗವಹಿಸಿದ್ದರು.

Leave a Reply

comments

Related Articles

error: