ಪ್ರಮುಖ ಸುದ್ದಿ

ಬಿಜೆಪಿ ಅಭ್ಯರ್ಥಿ ನಾರಾಯಣಗೌಡಗೆ ಮತ ಹಾಕಿದ ವಿವಿ ಪ್ಯಾಟ್ ಮುದ್ರಣ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ರಾಜ್ಯ(ಮಂಡ್ಯ)ಡಿ.5:-  ಬಿಜೆಪಿ ಅಭ್ಯರ್ಥಿ ನಾರಾಯಣಗೌಡರಿಗೆ ಮತ ಹಾಕಿದ ವಿವಿ ಪ್ಯಾಟ್ ಮುದ್ರಣದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕೆ.ಆರ್. ಪೇಟೆ ಬಿಜೆಪಿ ಅಭ್ಯರ್ಥಿಯಾಗಿರುವ ನಾರಾಯಣಗೌಡರಿಗೆ ಮತ ಹಾಕಿರುವ ಮತದ ಪ್ರತಿ ವೈರಲ್ ಆಗಿದ್ದು ಈ ರೀತಿ ಮಾಡಿದ್ದು, ತಾಲೂಕಿನ ಕರೋಟಿ ಗ್ರಾಮದ ಅನಿಲ್ ಗೌಡ ಎಂಬ ಯುವಕ  ಎಂದು ತಿಳಿದು ಬಂದಿದೆ.

ಈ ಬಗ್ಗೆ ಜೆಡಿಎಸ್ ವಲಯದಲ್ಲಿ ಚರ್ಚೆ ನಡೆಯುತ್ತಿದ್ದು ದೂರು ಕೊಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: