ಪ್ರಮುಖ ಸುದ್ದಿ

ಅತ್ಯಾಚಾರಿಗಳಿಗೆ ಕ್ಷಮಾದಾನ ನೀಡುವ ಪ್ರಶ್ನೆಯೇ ಇಲ್ಲ : ರಾಷ್ಟ್ರಪತಿ ರಮನಾಥ್ ಕೋವಿಂದ್

ದೇಶ(ನವದೆಹಲಿ)ಡಿ.6:- ಹೈದರಬಾದ್ ನಲ್ಲಿ ಪಶುವೈದ್ಯೆ   ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪಿಗಳನ್ನು ಪೊಲೀಸರು ಎನ್ ಕೌಂಟರ್ ಮಾಡಿದ ಬೆನ್ನಲ್ಲೆ ಅತ್ಯಾಚಾರಿಗಳಿಗೆ ಕ್ಷಮಾದಾನ ನೀಡುವ ಪ್ರಶ್ನೆಯೇ ಇಲ್ಲ ಎಂದು ರಾಷ್ಟ್ರಪತಿ ರಮನಾಥ್ ಕೋವಿಂದ್ ತಿಳಿಸಿದ್ದಾರೆ.

ಇಂದು ಈ ಬಗ್ಗೆ ಮಾತನಾಡಿದ ರಾಷ್ಟ್ರಪತಿ ರಮನಾಥ್ ಕೋವಿಂದ್, ಅತ್ಯಾಚಾರಿಗಳ ಕ್ಷಮಾದಾನದ ಅರ್ಜಿಗಳನ್ನು ಪರಿಗಣಿಸುವುದೇ ಇಲ್ಲ. ಇಂತಹ ಅರ್ಜಿಗಳ ಬಗ್ಗೆ ಸಂಸತ್ ಮರುಪರಿಶೀಲಿಸಬೇಕು. ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಕ್ಷಮಾದಾನ ಅರ್ಜಿಯನ್ನು ಸ್ವೀಕರಿಸುವುದಿಲ್ಲ. ಸುಪ್ರೀಂಕೋರ್ಟ್ ತೀರ್ಪು ಅಂತಿಮ ಎಂದು ಹೇಳಿದ್ದಾರೆ.

ಇಡೀ ದೇಶವೇ ಬೆಚ್ಚಿ ಬೀಳಿಸಿದ್ದ ಪಶು ವೈದ್ಯೆ   ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಹೈದರಾಬಾದ್  ಪೊಲೀಸರು ಘಟನೆ ನಡೆದ ಸ್ಥಳದಲ್ಲಿಯೇ ಎನ್ ಕೌಂಟರ್ ಮಾಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: