ಮೈಸೂರು

ಮೈಸೂರು-ನಂಜನಗೂಡು ರಸ್ತೆ ಹೆದ್ದಾರಿ ಕಾಮಗಾರಿ ಇನ್ನೂ ಪೂರ್ಣವಾಗದೆ ಟೋಲ್ ಶುಲ್ಕ ವಸೂಲಿ ಖಂಡಿಸಿ ಪ್ರತಿಭಟನೆ

ಮೈಸೂರು,ಡಿ.7:- ಮೈಸೂರು-ನಂಜನಗೂಡು ರಸ್ತೆ ಹೆದ್ದಾರಿ ಕಾಮಗಾರಿ ಇನ್ನೂ ಪೂರ್ಣವಾಗದೆ ಟೋಲ್ ಶುಲ್ಕ ವಸೂಲಿಗೆ ಮುಂದಾಗಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಮೈಸೂರು ಜಿಲ್ಲಾ ಘಟಕ ಇಂದು ಪ್ರತಿಭಟನೆ ನಡೆಸಿತು.

ಮೈಸೂರಿನ ನಜರದ ಬಾದ್ ನಲ್ಲಿರುವ ಮಿನಿ ವಿಧಾನಸೌಧದ ಎದುರು ಜಮಾಯಿಸಿದ ಪ್ರತಿಭಟನಾಕಾರರು  ಅಧೀಕ್ಷಕ ಇಂಜಿನಿಯರ್ ಅವರ ಕಾರ್ಯಾಲಯದ ಎದುರು ಪ್ರತಿಭಟನೆ ನಡೆಸಿ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿದರು. ಮೈಸೂರು ನಂಜನಗೂಡು ಹೆದ್ದಾರಿ ರಸ್ತೆ ಕಾಮಗಾರಿ ಇನ್ನೂ ಪೂರ್ಣವಾಗದೇ ಟೋಲ್ ಶುಲ್ಕ ವಸೂಲಿಗೆ ಮುಂದಾಗಿದ್ದಾರೆ. ಜೊತೆಗೆ ಕಾಮಗಾರಿ ಕೂಡ ಕಳಪೆಯಾಗಿದೆ. ರಸ್ತೆಗಳಲ್ಲಿ ಅಲ್ಲಲ್ಲಿ ಹಳ್ಳ ಕೊಳ್ಳಗಳಿಂದ ಕೂಡಿದೆ. ಆದರೂ ಯಾವ ಮಾನದಂದ ಮೇಲೆ ಇವರಿಗೆ ಟೋಲ್ ಶುಲ್ಕ ಮಾಡಲು ಅನುಮತಿ ನೀಡಲಾಗಿದೆ ಎಂದು ಪ್ರಶ್ನಿಸಿದರು. ಈ ಕ್ರಮವನ್ನು ಕರವೇ ಖಂಡಿಸುತ್ತದೆ ಎಂದರು.

ಪ್ರತಿಭಟನೆಯಲ್ಲೊ ಜಿಲ್ಲಾಧ್ಯಕ್ಷ ಪ್ರವೀಣಾ ಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: