ಮೈಸೂರು

ಜಿಲ್ಲೆಯ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ

ಮೈಸೂರು ಜಿಲ್ಲೆ ಬಿಜೆಪಿಯಲ್ಲೂ ಭಿನ್ನಮತ  ಭುಗಿಲೆದ್ದಿದ್ದು, ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪರಸ್ಪರ ಮಾತಿನ ಚಕಮಕಿ ನಡೆದಿದೆ.
ಮೈಸೂರು ಜಿಲ್ಲೆ ಟಿ. ನರಸೀಪುರ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಕೈ ಕೈ ಮಿಲಾಯಿಸಿಕೊಂಡು ಬಡಿದಾಡಿಕೊಂಡಿರುವ ಘಟನೆ ನಡೆದಿದೆ.

ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಎಂ. ಶಿವಣ್ಣನವರು ಕಾರ್ಯಕಾರಿಣಿ ಸಭೆಗೆ ಚಾಲನೆ ನೀಡಿ ಬಳಿಕ ಶಿವಣ್ಣನವರು ಸಭೆಯಿಂದ ನಿರ್ಗಮಿಸಿದ ಬಳಿಕ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿಕೊಂಡು ಬಿಜೆಪಿ ಸಭೆಯಲ್ಲಿ ಬಡಿದಾಡಿಕೊಂಡಿದ್ದಾರೆ. ಪರಸ್ಪರ ತಳ್ಳಾಟ, ನೂಕಾಟಗಳು ನಡೆದಿದ್ದು ಅಸಮಾಧಾನ ವ್ಯಕ್ತವಾಗಿದೆ. ಮುಂಬರುವ ವಿಧಾನಸಭೆ ಚುನಾವಣೆಗೆ ವರುಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪನವರ ಪರಮಾಪ್ತರಾಗಿರುವ ಕಾ.ಪು ಸಿದ್ದಲಿಂಗಸ್ವಾಮಿ ಪರ ವಿರೋಧವಾಗಿ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ.

Leave a Reply

comments

Related Articles

error: