ಪ್ರಮುಖ ಸುದ್ದಿ

ಅಧಿಕ ರಕ್ತದೊತ್ತಡ : ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ರಾಜ್ಯ(ಬೆಂಗಳೂರು)ಡಿ.11:-  ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಮಾಜಿ  ಸಿಎಂ  ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇಂದು ಬೆಳಗ್ಗೆ 6.30ರ ಸುಮಾರಿಗೆ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಸ್ವಲ್ಪ ಪ್ರಮಾಣದಲ್ಲಿ ಎದೆನೋವು ಕೂಡ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.

ಇತ್ತೀಚಿಗೆ ಉಪಚುನಾವಣೆಯಲ್ಲಿ ಸಕ್ರಿಯವಾಗಿದ್ದ ಸಿದ್ದರಾಮಯ್ಯ ಅವರು ಸ್ವಲ್ಪ ದಣಿದಿದ್ದರು. ಈ ಕಾರಣಕ್ಕೆ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದೆ ಎನ್ನಲಾಗಿದ್ದು, , ಅವರ ಕುಟುಂಬ ವೈದ್ಯರ ಸಲಹೆಯ ಮೇರೆಗೆ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅವರನ್ನು ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡುವುದಿಲ್ಲ. ಪರೀಕ್ಷೆ ಮಾಡಿ ವಾಪಸ್ ಮನೆಗೆ ಕಳುಹಿಸಲಾಗುವುದು ಎಂದು ವೈದ್ಯರು ಹೇಳಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: