ಸುದ್ದಿ ಸಂಕ್ಷಿಪ್ತ

ಬೀದಿನಾಟಕ ಕಲಾವಿದರಿಂದ ದರಪಟ್ಟಿ ಆಹ್ವಾನ

ರಾಜ್ಯ(ಮಡಿಕೇರಿ), ಡಿ.12:-  ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು ಹೆಚ್ಚಾಗಿ ವಾಸಿಸುವ ಕಾಲೋನಿಗಳಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ 2016ರ ಕುರಿತು ಬೀದಿ ನಾಟಕಗಳ ಮೂಲಕ ಜನ ಜಾಗೃತಿ ಮೂಡಿಸುವ ಸಲುವಾಗಿ (ಸ್ಥಳೀಯ ನುರಿತ ಕಲಾವಿದರಿಗೆ ಮೊದಲ ಆದ್ಯತೆ) ಆಸಕ್ತ ಬೀದಿ ನಾಟಕ ಕಲಾವಿದರಿಂದ ದರಪಟ್ಟಿ ಆಹ್ವಾನಿಸಲಾಗಿದೆ.

ಒಂದು ಬೀದಿ ನಾಟಕ ಕಾರ್ಯಕ್ರಮಕ್ಕೆ ತಗಲುವ ಅಂದಾಜು ವೆಚ್ಚದ ದರಪಟ್ಟಿಯನ್ನು ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಕೊಡಗು ಜಿಲ್ಲೆ, ಮಡಿಕೇರಿ ಇವರ ಹೆಸರಿಗೆ ಸೀಲ್ ಮಾಡಿದ ಲಕೋಟೆಯಲ್ಲಿ ಸಲ್ಲಿಸುವಂತೆ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಸಿರಾಜ್ ಅಹ್ಮದ್ ಅವರು ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: