ಮೈಸೂರು

 ಶ್ರೀ ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಮಾನವ ಹಕ್ಕುಗಳ ದಿನ ಆಚರಣೆ

ಮೈಸೂರು,ಡಿ.12:-  ಶ್ರೀ ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ರಾಜ್ಯಶಾಸ್ತ್ರ ವಿಭಾಗ ಹಾಗೂ ಮಾನವ ಹಕ್ಕುಗಳ ರಕ್ಷಣಾ ಸಮಿತಿ(ರಿ) ಇವರ ಸಹಯೋಗದೊಂದಿಗೆ “ವಿಶ್ವ ಮಾನವ ಹಕ್ಕುಗಳ ದಿನ”ವನ್ನು ಇತ್ತೀಚೆಗೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಪಾಲ್ಗೊಂಡ  ಮಾನವ ಹಕ್ಕುಗಳ ರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಅಪ್ಪಾಸ್ವಾಮಿ ಮಾತನಾಡಿ  ಭಾರತದಲ್ಲಿ ಮಾನವ ಹಕ್ಕುಗಳ ಆಯೋಗವನ್ನು 1993ರ ಅಕ್ಟೋಬರ್ 12 ರಂದು ರಚಿಸಲಾಯಿತು. ಈ ಆಯೋಗವು ಮಾನವ ಹಕ್ಕುಗಳ ರಕ್ಷಣೆ ಮತ್ತು  ಉತ್ತೇಜನಕ್ಕಾಗಿ ಸ್ಥಾಪಿತವಾಗಿದ್ದು ಜೀವನ, ಸ್ವಾತಂತ್ರ್ಯ, ಸಮಾನತೆ ಮತ್ತು ಸಂವಿಧಾನದ ಭರವಸೆಯ ವ್ಯಕ್ತಿಯ ಘನತೆಗೆ ಸಂಬಂಧಿಸಿದ ಹಕ್ಕುಗಳು ಅಥವಾ ಅಂತರರಾಷ್ಟ್ರೀಯ ಕರಾರುಗಳಾಗಿವೆ.

ಮಾನವ ಹಕ್ಕುಗಳ ಆಯೋಗವು ಹಕ್ಕುಗಳ ಉಲ್ಲಂಘನೆಯಾಗುವುದನ್ನು ತಡೆಯುವ ಹಾಗೂ ಹಕ್ಕುಗಳ ಉಲ್ಲಂಘನೆಗೆ ಒಳಗೊಂಡವರಿಗೆ ನೆರವು ನೀಡುವ ಧ್ಯೇಯೋದ್ದೇಶವನ್ನು ಹೊಂದಿದೆ ಎಂದು   ತಿಳಿಸಿದರು.

ಯಾವುದೇ ಒಬ್ಬ ವ್ಯಕ್ತಿ ಹಕ್ಕಿಲ್ಲದೆ ಬದುಕಲು ಸಾಧ್ಯವಿಲ್ಲ. ಬದುಕಲು ಮತ್ತು ತನ್ನ ಅಭಿಪ್ರಾಯ ವ್ಯಕ್ತಪಡಿಸಲು ಪ್ರತಿಯೊಬ್ಬರಿಗೆ ಹಕ್ಕುಗಳು ಅವಶ್ಯಕವಾಗಿವೆ. ನವೆಂಬರ್ 16ರಂದು ಭಾರತದ ಸಂವಿಧಾನ ದಿನ ಹೇಗೆ ಆಚರಿಸಲಾಗುತ್ತದೆಯೋ ಅದೇ ರೀತಿ ಡಿಸೆಂಬರ್ 10ನ್ನು ‘ವಿಶ್ವ ಮಾನವ ಹಕ್ಕುಗಳ ದಿನ’ವನ್ನಾಗಿ ಜಗತ್ತಿನೆಲ್ಲೆಡೆ ಆಚರಿಸಲಾಗುತ್ತದೆ ಎಂದರು.

ಪ್ರಾಂಶುಪಾಲರಾದ  ಡಾ.ಎಂ.ಶಾರದ ಮಾತನಾಡಿ 1948ರಿಂದ ವಿಶ್ವ ಮಾನವ ಹಕ್ಕುಗಳ ದಿನ ಆಚರಿಸಲಾಗುತ್ತಿದೆ. ಇದೇ ದಿನದಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ವಿಶ್ವ ಮಾನವ ಹಕ್ಕುಗಳ ಘೋಷಣೆಯನ್ನು ಅಂಗೀಕರಿಸಿತು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳ ರಕ್ಷಣಾ ಸಮಿತಿ  ರಾಜ್ಯ ಕಾರ್ಯದರ್ಶಿ ಅನಂತರಾಮುಗಂ,   ಜಿಲ್ಲಾ ಯುವ ಅಧ್ಯಕ್ಷ ಅನಿಲ್ , , ಮಂಡ್ಯ ಜಿಲ್ಲಾ ಉಪಾಧ್ಯಕ್ಷ ಪಂಚಾಕ್ಷರಿ,     ಶ್ರೀ ನಟರಾಜ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ   ವಿ. ಪ್ರದೀಪ್,   ನಟರಾಜ ಪ್ರತಿಷ್ಠಾನದ ಶೈಕ್ಷಣಿಕ ಸಂಯೋಜನಾಧಿಕಾರಿಗಳಾದ   ಶಿವಕುಮಾರ್,   ಆನಂದ್  ಮತ್ತು ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ   ಪೂರ್ಣಿಮಾ  ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. (ಎಸ್.ಎಚ್)

Leave a Reply

comments

Related Articles

error: